ತೀರ್ಥಹಳ್ಳಿ ; ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ.
ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29) ನೇಣಿಗೆ ಶರಣಾದ ದುರ್ದೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಅಷ್ಟರಲ್ಲೆ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

