ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಮಧ್ಯರಾತ್ರಿ 1:30 ರ ವೇಳೆಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ರಾಮಚಂದ್ರ ರಾವ್ (85) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಈ ವ್ಯಕ್ತಿ ಸಿಂಗಲ್ ಬ್ಯಾರಲ್ ಬಂದೂಕಿನಿಂದ ತನ್ನ ಕುತ್ತಿಗೆ ಸಮೀಪ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಮೃತದೇಹದ ತಲೆ ಭಾಗ ಸಂಪೂರ್ಣವಾಗಿ ಛಿದ್ರವಾಗಿದೆ.

ರಾಮಚಂದ್ರ ರಾವ್ ಕಳೆದ ಮೂರು ದಿನಗಳ ಹಿಂದೆ ಬಿದ್ದು ತಲೆಗೆ ಗಾಯಗೊಂಡಿದ್ದರು. ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ, ಗಾಯದಿಂದ ಉಂಟಾದ ನೋವು ಕಡಿಮೆಯಾಗಿರಲಿಲ್ಲ. ಇದರಿಂದಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂದೂಕಿಗೆ ಪರವಾನಗಿ ಇದೆಯೋ ಇಲ್ಲವೋ ಎಂಬುದರ ಪರಿಶೀಲನೆ ಸೇರಿದಂತೆ, ಟ್ರಿಗರ್ ಹೇಗೆ ಪ್ರೆಸ್ ಆಗಿದೆ ಎಂಬ ವಿಚಾರಗಳನ್ನೂ ತಪಾಸಣೆ ಮಾಡಲಾಗುತ್ತಿದೆ.

