Ripponpete

ಪಂಪ್‌ಸೆಟ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು !

ರಿಪ್ಪನ್‌ಪೇಟೆ ; ಹರತಾಳು ಗ್ರಾಮದ ದೊಣಂದೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಕೃಷ್ಣಪ್ಪ (59) ಸಾವನ್ನಪ್ಪಿದ ವ್ಯಕ್ತಿ. ಈತ ದೊಣಂದೂರು ನಿವಾಸಿಯಾಗಿದ್ದು ಕೂಲಿ ಕೆಲಸಮಾಡಿ ಜೀವನ ನಡೆಸುತ್ತಿದ್ದನು. ಸುಮಾರು ಮೂರು ವರ್ಷಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಪ್ಪ ಚಿಕಿತ್ಸೆ ಪಡೆಯುತ್ತಿದ್ದನು. ಮನೆಯಲ್ಲಿ ಬಾವಿ ತೋಡುವ ಕೆಲಸ ನಡೆಯುತ್ತಿದ್ದಾಗ, ಬಾವಿಯಲ್ಲಿ ಸಂಗ್ರಹಿತ ನೀರನ್ನು ಹೊರತೆಗೆದು ಖಾಲಿ ಮಾಡಲು ವಿದ್ಯುತ್ ಪಂಪ್‌ಸೆಟ್ ಚಾಲನೆ ಮಾಡಲು ವೈರ್ ಅನ್ನು ಅಡುಗೆಮನೆಯ ಸ್ವಿಚ್‌ಗೆ ಸಂಪರ್ಕಿಸಲು ಹೋದಾಗ ವಿದ್ಯುತ್ ಸ್ಪರ್ಶವಾಗಿ ಅವರ ಬಲಗೈಗೆ ತೀವ್ರ ಗಾಯವಾಗಿತ್ತು.

ಈ ಘಟನೆಯಲ್ಲಿ ಕೃಷ್ಣಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಪತ್ನಿ ವೇದಾವತಿ ಮತ್ತು ಸ್ಥಳದಲ್ಲಿದ್ದ ಕಾರ್ಮಿಕರು ತಕ್ಷಣ ಅವರನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ವೈದ್ಯರು ಪರಿಶೀಲಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೃತರ ಪತ್ನಿ ವೇದಾವತಿ ನೀಡಿದ ದೂರಿನ ಆಧಾರದ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!