Arecanut

ಶಿವಮೊಗ್ಗದಲ್ಲಿ ಭೀಕರ ದುರಂತ : ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ವ್ಯಕ್ತಿ ದರ್ಮರಣ

ಶಿವಮೊಗ್ಗ ; ಅಡಿಕೆ ಬೇಯಿಸುವಾಗ ಆಕಸ್ಮಿಕವಾಗಿ ಕುದಿಯುವ ಚೊಗರಿದ್ದ ಹಂಡೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಡ್ಡಿನಕೊಪ್ಪದ ನಿವಾಸಿಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

InShot 20260917 134049142

ಶಿವಮೊಗ್ಗ ; ಅಡಿಕೆ ಬೇಯಿಸುವಾಗ ಆಕಸ್ಮಿಕವಾಗಿ ಕುದಿಯುವ ಚೊಗರಿದ್ದ ಹಂಡೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಡ್ಡಿನಕೊಪ್ಪದ ನಿವಾಸಿಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರುದ್ರಪ್ಪ ಅವರ ಮಗ ಜೇನುಕುಮಾರ್ ಮೃತಪಟ್ಟ ವ್ಯಕ್ತಿ. ಸೆಪ್ಟೆಂಬರ್ 8ರಂದು ಮನೆ ಸಮೀಪದ ಶೆಡ್‌ನಲ್ಲಿ ಅಡಿಕೆ ಬೇಯಿಸುವ ಕೆಲಸದಲ್ಲಿ ತೊಡಗಿದ್ದ ಇವರು, ಬೆಂದ ಅಡಿಕೆಯನ್ನು ಹೊರಗೆ ತೆಗೆದ ನಂತರ ಹಂಡೆಯಲ್ಲಿದ್ದ ಚೊಗರು ತೆಗೆಯಲು ಪಕ್ಕದ ಕಟ್ಟೆಯನ್ನೇರಿದ್ದರು. ಈ ಸಂದರ್ಭದಲ್ಲಿ ಆಯ ತಪ್ಪಿ ನೇರವಾಗಿ ಕುದಿಯುವ ಹಂಡೆಯೊಳಗೆ ಬಿದ್ದಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಮೂವರು ಕಾರ್ಮಿಕರು ತಕ್ಷಣವೇ ಅವರನ್ನು ಹೊರಗೆಳೆದಿದ್ದಾರೆ. ಬಳಿಕ ತೀವ್ರ ಉರಿಯಿಂದಾಗಿ ಹೊರಗೆ ಓಡಿಬಂದು ಶರ್ಟ್ ಕಳಚಿದ ಜೇನುಕುಮಾರ್, ಮತ್ತೆ ಶೆಡ್‌ಗೆ ಮರಳುವಷ್ಟರಲ್ಲಿ ದೇಹದ ಬಹುಭಾಗ ತೀವ್ರವಾಗಿ ಸುಟ್ಟುಹೋಗಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತಕ್ಷಣವೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸೂಚನೆಯಂತೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಭೀಕರ ದೃಶ್ಯ ಶೆಡ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]