ಶಿವಮೊಗ್ಗ ; ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಕಂದಕಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ನಾಗರಾಜ್ (32) ಮೃ*ತ ದುರ್ಧೈವಿ. ದೇವಸ್ಥಾನದಿಂದ ಮನೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಗುಂಡಿಯಲ್ಲಿ ಇಂದು ಮೃ**ತದೇಹ ಪತ್ತೆಯಾಗಿದೆ.
ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿಯ ವಿಸರ್ಜನೆ ಬಳಿಕ ಆಡಿಕೊಟ್ಟಿಗೆ ಗ್ರಾಮದ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿದರು. ಗಣೇಶೋತ್ಸವದ ಖರ್ಚು ವೆಚ್ಚದ ಬಗ್ಗೆ ಚರ್ಚಿಸಿ ಎಲ್ಲರೂ ಮನೆಗೆ ತೆರಳಿದ್ದರು.
ಮನೆಗೆ ಬಾರದ ನಾಗರಾಜ್ !
ಇಂದು ಬೆಳಗ್ಗೆವರೆಗೆ ನಾಗರಾಜ್ ಮನೆಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದರು. ಸಂಜೆ ಹೊತ್ತಿಗೆ ದೇವಸ್ಥಾನದ ಪಕ್ಕದಲ್ಲಿ ಆನೆ ನಿಯಂತ್ರಣಕ್ಕೆ ತೆಗೆಯಲಾಗಿದ್ದ ಗುಂಡಿಯಲ್ಲಿ ನಾಗರಾಜ್ ಮೃ*ತದೇಹ ಪತ್ತೆಯಾಗಿದೆ.
ಗರಂ ಆದ ಗ್ರಾಮಸ್ಥರು !
ಆಡಿನಕೊಟ್ಟಿಗೆ ವ್ಯಾಪ್ತಿಯಲ್ಲಿ ಆನೆ ನಿಯಂತ್ರಣ ಟ್ರಂಚ್ ತೆಗೆಯುವಾಗ ಗ್ರಾಮಸ್ಥರು ವಿರೋಧಿಸಿದ್ದರು. ಮನೆಗಳ ಸಮೀಪ ಟ್ರಂಚ್ ತೆಗೆಯದಂತೆ ಆಗ್ರಹಿಸಿದ್ದರು. ಈಗ ಟ್ರಾಂಚ್‌ಗೆ ಬಿದ್ದು ನಾಗರಾಜ್ ಮೃತಪಟ್ಟಿದ್ದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.