ಹೊಸನಗರ

ಪಂಪ್‌ಸೆಟ್ ಪೈಪ್‌ಗೆ ನೀರು ತುಂಬಲು ಹೋದ ವ್ಯಕ್ತಿ ಕಾಲುಜಾರಿ ಕೆರೆಗೆ ಬಿದ್ದು ನೀರುಪಾಲು

ಪಂಪ್‌ಸೆಟ್ ಪೈಪ್‌ಗೆ ನೀರು ತುಂಬಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಭಾನುವಾರ ಸಂಜೆ ನಡೆದಿದೆ.

ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು Ramesh

ಹೊಸನಗರ: ತಾಲೂಕಿನ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಲ ಗ್ರಾಮದಲ್ಲಿ ಪಂಪ್‌ಸೆಟ್ ಪೈಪ್‌ಗೆ ನೀರು ತುಂಬಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಭಾನುವಾರ ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತನನ್ನು ಮುತ್ತಲ ಗ್ರಾಮದ ನಿವಾಸಿ ರಮೇಶ್ ಬಿನ್ ಶಿವಪ್ಪ (40) ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ರಮೇಶ್ ಪಂಪ್‌ಸೆಟ್‌ನ ಫುಟ್‌ವಾಲ್ವ್‌ಗೆ ನೀರು ತುಂಬಲು ಹೋದಾಗ ಈ ದುರಂತ ಸಂಭವಿಸಿದೆ. ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ತಕ್ಷಣವೇ ಗಮನಿಸಿದ ಮನೆಯವರು, ಕೂಡಲೇ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಹೊಸನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅವರನ್ನು ಪರೀಕ್ಷಿಸಿದ ವೈದ್ಯರು ರಮೇಶ್ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಅಕಾಲಿಕವಾಗಿ ಮೃತಪಟ್ಟ ರಮೇಶ್ ಅವರ ಅಗಲಿಕೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆಗೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!