ತೀರ್ಥಹಳ್ಳಿ ; ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕೋಣಂದೂರು ಸಮೀಪದ ಕಾರ್ಕೊಡ್ಲು ಗ್ರಾಮದಲ್ಲಿ ನಡೆದಿದೆ.
ಕೇರಳದ ನಿವಾಸಿ ಸತೀಶ್ (45) ಮೃತ ದುರ್ದೈವಿ. ಕಾರ್ಕೊಡ್ಲುವಿನಲ್ಲಿ ರಾಘು ಅವರು ಈಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿದೆ. ಅದನ್ನು ರಕ್ಷಿಸಲು ಬಾವಿಗೆ ಇಳಿದಿದ್ದ ಸತೀಶ್ ಉಸಿರಾಡಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಇವರಿಗೆ ಇಬ್ಬರು ಪುತ್ರಿಯರು ಇದ್ದಾರೆ.
ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ಬಾವಿಯಿಂದ ಮೇಲಕ್ಕೆ ತೆಗೆದರು. ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸತೀಶ್ ಅವರ ಮೃತದೇಹವನ್ನು ಕೇರಳಕ್ಕೆ ಕಳುಹಿಸಿಕೊಡಲಾಗಿದೆ.
ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.