ಶಿವಮೊಗ್ಗ ಸುದ್ದಿ

ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ವ್ಯಕ್ತಿ ಸಾವು !

ತೀರ್ಥಹಳ್ಳಿ ; ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕೋಣಂದೂರು ಸಮೀಪದ ಕಾರ್ಕೊಡ್ಲು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಕೇರಳದ ನಿವಾಸಿ ಸತೀಶ್ (45) ಮೃತ ದುರ್ದೈವಿ. ಕಾರ್ಕೊಡ್ಲುವಿನಲ್ಲಿ ರಾಘು ಅವರು ಈಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿದೆ. ಅದನ್ನು ರಕ್ಷಿಸಲು ಬಾವಿಗೆ ಇಳಿದಿದ್ದ ಸತೀಶ್ ಉಸಿರಾಡಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಇವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

ಸತೀಶ್‌ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ಬಾವಿಯಿಂದ ಮೇಲಕ್ಕೆ ತೆಗೆದರು. ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸತೀಶ್‌ ಅವರ ಮೃತದೇಹವನ್ನು ಕೇರಳಕ್ಕೆ ಕಳುಹಿಸಿಕೊಡಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!