ಸಾಗರ ; ಸಾಲಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಗೌತಮಪುರದ ಮೇಘರಾಜ್ ಬಿ.ಹೆಚ್ (43) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೂಲತಃ ರೈತರಾಗಿರುವ ಮೇಘರಾಜ್ 5 ಲಕ್ಷ ರೂ.ಗಳಿಗೂ ಅಧಿಕ ಬೆಳೆಗಾಗಿ ಸಾಲ ಮಾಡಿರುವ ಮಾಹಿತಿ ತಿಳಿದು ಬಂದಿದೆ.
ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹಾಗೂ ಗೋಲ್ಡ್ ಲೋನ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಕಳೆದ ಮೂರು ವರ್ಷದಿಂದ ಕೈಗೆ ಬೆಳೆ ಸರಿಯಾಗಿ ಸಿಗದ ಹಿನ್ನೆಲೆ ಹಾಗೂ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More:ಕಾಡಾನೆ ದಾಳಿ: ಭದ್ರಾವತಿಯಲ್ಲಿ ವ್ಯಕ್ತಿ ದುರ್ಮರಣ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.