ರಿಪ್ಪನ್‌ಪೇಟೆ : ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿ, ತಾಮ್ನಾಡಿಗೆ ಬಂದ ಎರಡೇ ದಿನದಲ್ಲಿ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಗ್ರಾಮದ ಮದೀನಾ ಕಾಲೋನಿಯ ಇಮ್ರಾನ್ (36) ಮೃತ ವ್ಯಕ್ತಿ. ಮೂರು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ ನಿರ್ವಹಿಸುತ್ತಿದ್ದ ಇವರು ಎರಡು ದಿನಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದರು.
ರಾತ್ರಿ ಮಕ್ಕಳೊಂದಿಗೆ ಊಟ ಮಾಡಿ, ಮಲಗಿದವರಿಗೆ ಮಂಗಳವಾರ ಬೆಳಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಶಿವಮೊಗ್ಗಕ್ಕೆ ಖಾಸಗಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





