N.R.PURA ; ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.
ಕೆರೆಗದ್ದೆ ಉಮೇಶ್ (56) ಮೃತ ದುರ್ದೈವಿ. ಉಮೇಶ್ ಹೊಲದಲ್ಲಿ ಕೆಲಸ ಮಾಡುವಾಗ ಕಾಡಾನೆ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರಾಮಕ್ಕೆ ಆನೆ ಬಂದಿರುವ ವಿಚಾರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಘಟನಾ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

