ಹೊಸನಗರ ; ರಾಜ್ಯದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಾಣಿ ಅಣೆಕಟ್ಟು ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತ್ಯಧಿಕ 307 ಮಿ.ಮೀ. ಮಳೆ ದಾಖಲಾಗಿದೆ.
ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?
- ಹುಲಿಕಲ್ : 279 ಮಿ.ಮೀ.
- ಸಾವೆಹಕ್ಲು : 262 ಮಿ.ಮೀ.
- ಮಾಸ್ತಿಕಟ್ಟೆ : 255 ಮಿ.ಮೀ.
- ಯಡೂರು : 232 ಮಿ.ಮೀ.
- ಸುಳಗೋಡು : 214 ಮಿ.ಮೀ.
- ಕಾರ್ಗಲ್ (ಸಾಗರ) : 138 ಮಿ.ಮೀ.
- ಹೊಸನಗರ : 119 ಮಿ.ಮೀ.
- ಮೇಲಿನಬೆಸಿಗೆ : 118 ಮಿ.ಮೀ.
- ಮಾರುತಿಪುರ : 102 ಮಿ.ಮೀ.
- ಮುಂಬಾರು : 97 ಮಿ.ಮೀ.
- ಕೋಡೂರು : 97 ಮಿ.ಮೀ.
- ಹೊಸೂರು (ಸಂಪೆಕಟ್ಟೆ) : 83 ಮಿ.ಮೀ.
- ಬಾಳೂರು : 81.5 ಮಿ.ಮೀ.
- ಹುಂಚ : 58.4 ಮಿ.ಮೀ.
1766.40 ಅಡಿ ತಲುಪಿದ ಲಿಂಗನಮಕ್ಕಿ ಜಲಾಶಯ :
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1766.40 ಅಡಿ ತಲುಪಿದ್ದು ಕಳೆದ ವರ್ಷ ಇದೇ ಅವಧಿಗೆ 1745.25 ಅಡಿ ದಾಖಲಾಗಿದ್ದು ಜಲಾಶಯಕ್ಕೆ 39961 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಶಾಲೆಗಳಿಗೆ ರಜೆ :
ಹೊಸನಗರ ತಾಲೂಕಿನಾದ್ಯಂತ ಮಳೆಯ ಆರ್ಭಟ ನಿರಂತರವಾಗಿದ್ದು ಅತಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಸೋಮವಾರ ಶಾಲಾ, ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.