ಹೊಸನಗರ

ಸೇವಾ ಸಂಕಲ್ಪ ಅಭಿಯಾನ ಹಿನ್ನೆಲೆ ಅ.14ರಂದು ಹೊಸನಗರದಲ್ಲಿ ಮ್ಯಾರಥಾನ್ ; ಹರತಾಳು ಹಾಲಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ 25ನೇ ವರ್ಷದ ಸಂಭ್ರಮಾಚರಣೆ ನಿಮಿತ್ತ ಅಕ್ಟೋಬರ್ 14ರಂದು ಹೊಸನಗರದಲ್ಲಿ 'ಸೇವಾ ಸಂಕಲ್ಪ ದಿನ'ವನ್ನು ಆಚರಿಸಲಾಗುತ್ತಿದೆ.

ಅ.14ರಂದು ಹೊಸನಗರದಲ್ಲಿ ಮ್ಯಾರಥಾನ್ Halappa

ರಿಪ್ಪನ್‌ಪೇಟೆ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ 25ನೇ ವರ್ಷದ ಸಂಭ್ರಮಾಚರಣೆ ನಿಮಿತ್ತ ಅಕ್ಟೋಬರ್ 14ರಂದು ಹೊಸನಗರದಲ್ಲಿ ‘ಸೇವಾ ಸಂಕಲ್ಪ ದಿನ’ವನ್ನು ಆಚರಿಸಲಾಗುತ್ತಿದೆ. ಯುವಜನತೆಯನ್ನು ದುಶ್ಚಟಗಳಿಂದ ಮುಕ್ತಗೊಳಿಸುವ ಜಾಗೃತಿ ಮೂಡಿಸಲು ಬೃಹತ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಬುಧವಾರ ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ನಡೆದ ಪಕ್ಷದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು. ಮ್ಯಾರಥಾನ್ ನಡಿಗೆಯು ಹೊಸನಗರದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ಆರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಬಳಿಕ ಖಾಸಗಿ ಬಸ್ ನಿಲ್ದಾಣದಲ್ಲಿ ಬಹಿರಂಗ ಸಭೆಯ ಮೂಲಕ ಸಮಾರೋಪಗೊಳ್ಳಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇದೇ ಮೊದಲ ಬಾರಿಗೆ ಹೊಸನಗರಕ್ಕೆ ಆಗಮಿಸುತ್ತಿದ್ದು, ಅವರಿಗೆ ಅದ್ದೂರಿ ಸ್ವಾಗತ ಕೋರಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಮಾಜಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಸೇವಾ ಸಂಕಲ್ಪದ ಅಂಗವಾಗಿ ಎಸ್.ಸಿ. ಮತ್ತು ಎಸ್.ಟಿ. ಮೋರ್ಚಾ ವತಿಯಿಂದ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗಾಗಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. “ಕಾರ್ಯಕರ್ತರಿಗೊಂದು ಕೆಲಸ, ಕೆಲಸಕ್ಕೊಬ್ಬ ಕಾರ್ಯಕರ್ತ” ಎಂಬ ಧ್ಯೇಯದೊಂದಿಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲು ಈ ವಿಶೇಷ ಅಭಿಯಾನ ರೂಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಹೊಸನಗರ ಮಂಡಲ ಅಧ್ಯಕ್ಷ ಎನ್. ಸತೀಶ್, ಮುಖಂಡರಾದ ಎನ್.ಆರ್. ದೇವಾನಂದ, ಪ್ರಶಾಂತ್ ಕುಕ್ಕೆ, ಗಣಪತಿ ಬೆಳಗೋಡು, ಎ.ಟಿ. ನಾಗರತ್ನ, ಪರಮೇಶ್ ಹೊನ್ನಕೊಪ್ಪ, ವೀರೇಶ್ ಆಲವಳ್ಳಿ ಹಾಗೂ ಜಿ.ಡಿ. ಮಲ್ಲಿಕಾರ್ಜುನ ಮುಂತಾದವರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!