ಕರಿನಗೊಳ್ಳಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿ ವರ್ಧಂತ್ಯೋತ್ಸವ | ಭಕ್ತಿ ಮೂಢನಂಬಿಕೆಯಿಂದ ಕೂಡಿರಬಾರದು ; ಶಾಸಕ ಬೇಳೂರು ಗೋಪಾಲಕೃಷ್ಣ

Written by Mahesha Hindlemane

Published on:

ಹೊಸನಗರ ; ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಶ್ರೀ ಮಾರಿಕಾಂಬಾ ದೇವಸ್ಥಾನದ 3ನೇ ವರ್ಷದ  ವರ್ಧಂತ್ಯೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ನಡೆಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವರ್ಧಂತ್ಯೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಶ್ರೀದೇವಿಗೆ ವಿಶೇಷ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳು ಜರುಗಿತು. ಮಧ್ಯಾಹ್ನ ನೂರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಭಾಗದ ದೇವಸ್ಥಾನಗಳು ಕೇವಲ ಪೂಜಾ ಕೇಂದ್ರಗಳಲ್ಲ. ಅವು ಸಮಾಜವನ್ನು ಒಗ್ಗೂಡಿಸುವ ಕೊಂಡಿಗಳಾಗಿವೆ. ಧಾರ್ಮಿಕ ಟ್ರಸ್ಟ್‌ಗಳ ಮೂಲಕ ಇಂತಹ ಸಾಮಾಜಿಕ ಕಳಕಳಿಯ ಕೆಲಸಗಳು ನಡೆಯುತ್ತಿರುವುದು ಶ್ಲಾಘನೀಯ. ದೇವಿಯ ಸನ್ನಿಧಿಯಲ್ಲಿ ನಾನು ಮುಂದಿನ ದಿನಗಳಲ್ಲಿ ಸಚಿವ ಸ್ಥಾನಕ್ಕಾಗಿ ಪ್ರಾರ್ಥಿಸಿದ್ದೇನೆ. ಇಲ್ಲಿ ನಿರ್ಮಾಣವಾಗಿರುವ ಭವ್ಯ ರಂಗಮಂದಿರವು ಊರಿನ ಅಭಿವೃದ್ಧಿಯ ಸಂಕೇತವಾಗಿದೆ. ಭಕ್ತಿಯೂ ನಂಬಿಕೆ ಮತ್ತು ವಿಶ್ವಾಸದ ಮೇಲೆ ಇರಬೇಕೇ ಹೊರತು ಮೂಢನಂಬಿಕೆಯಿಂದ ಕೂಡಿರಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ದೇವಸ್ಥಾನದ ಅಧ್ಯಕ್ಷ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಜಿ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವಸ್ಥಾನದ ಜೀರ್ಣೋದ್ದಾರ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಭಕ್ತರ ಸೇವೆ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಗೌಡ , ಮುಂಬಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್. ಕುಮಾರ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್. ಚಿದಂಬರ, ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಂದ್ರ ಬಿ.ಎನ್, ದಿವ್ಯ,  ಶಶಿಕಲಾ ಅಣ್ಣಪ್ಪ ಸೇರಿದಂತೆ ಊರಿನ ಅನೇಕ ಗಣ್ಯರು ಹಾಜರಿದ್ದರು.

Leave a Comment