ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಹೊರಸೂಸಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮಲೆನಾಡಿನ ಹಿರಿಮೆಯನ್ನು ಪ್ರಕಟಿಸಿದ್ದಾರೆ.
ಪ್ರಾಚ್ಯ ಪ್ರಜ್ಞೆ ಸ್ಪರ್ಧೆ ಹಾಗೂ ಬಾಲವಿಕಾಸ ಭಾಷಣ ಸ್ಪರ್ಧೆಯಲ್ಲಿ ಕು|| ಕೆ.ಎನ್ ಸ್ಫೂರ್ತಿ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕು|| ಸೌಜನ್ಯ ಪ್ರಬಂಧ ಸ್ಪರ್ಧೆಯಲ್ಲಿ ಕು|| ಸಂಜನಾ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಗ್ರಾಮೀಣ ಪ್ರತಿಭೆಗಳ ರಾಜ್ಯಮಟ್ಟದಲ್ಲೂ ತಮ್ಮ ಸಾಧನೆಯನ್ನು ಪ್ರಕಟಪಡಿಸಿ ಮಲೆನಾಡಿನ ಹಿರಿಮೆಯನ್ನು ಹೆಚ್ಚಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವೈ ಗಣೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಂಗನಾಥ್, ಶಿಕ್ಷಣ ಸಂಯೋಜಕ ಕರಿಬಸಪ್ಪ, ಶಾಲಾ ಮುಖ್ಯ ಶಿಕ್ಷಕ ಬಿ.ಎನ್ ಪರಶುರಾಮಪ್ಪ, ಮಾರ್ಗದರ್ಶಿ ಶಿಕ್ಷಕ ಎಂ.ಎಂ ರವಿಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ಉಮೇಶ್, ವಾಸಂತಿ ಬಸವನಗೌಡ, ಶ್ರೀಕಾಂತ್, ಪೂಜಾ ನಾಗೇಶ್, ರೇವಣಸಿದ್ದಪ್ಪ, ಬಾಲಾಜಿ ಪೋಷಕರು ಗ್ರಾಮಸ್ಥರು ಎಸ್‌ಡಿಎಂಸಿ ಸದಸ್ಯರುಗಳು ಶುಭ ಹಾರೈಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





