ರಿಪ್ಪನ್ಪೇಟೆ ; ಅರಸಾಳು ಮತ್ತು ಸಿರಿಗೆರೆ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡು ರೈತರ ಬೆಳೆಗಳನ್ನು ನಾಶಗೊಳಿಸುತ್ತಿರುವುದನ್ನು ಖಂಡಿಸಿ ನ. 27 ರ ಗುರುವಾರ ಬೆಳಗ್ಗೆ 11 ಗಂಟೆಗೆ ಅರಸಾಳು ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ರೈತ ಪರ ಸಂಘಟನೆಗಳು ಅನಿರ್ಧಿಷ್ಟಾವಧಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತ್ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ತಿಳಿಸಿದರು.

ರಿಪ್ಪನ್ಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಆನೆಗಳ ಸ್ಥಳಾಂತರದೊಂದಿಗೆ ಮಲೆನಾಡಿನ ರೈತರಿಗೆ ಶಾಶ್ವತ ಪರಿಹಾರ ದೊರೆಕಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ ಅವರು, ಈಗಾಗಲೇ ಆನೆ ದಾಳಿಯಿಂದ ರೈತರು ಬೆಳೆದ ಬೆಳೆಯನ್ನು ಧ್ವಂಸ ಮಾಡಿರುವ ರೈತ ಕುಟುಂಬಕ್ಕೆ ತಕ್ಷಣ ಪರಿಹಾರ ಕೊಡುವಂತೆ ಸಹ ಆಗ್ರಹಿಸಲಾಗುವುದೆಂದರು.
ಕಳೆದ ಐದಾರು ದಿನಗಳಿಂದ ಬೆಳ್ಳೂರು, ಅರಸಾಳು, ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಅರಣ್ಯ ಇಲಾಖೆಯವರು ಸ್ಥಳಾಂತರ ಮಾಡುವುದು ಇಲ್ಲವೇ ಓಡಿಸುವ ಕೆಲಸವನ್ನು ಮಾಡುವಂತೆ ಹೇಳಿ ಕಳೆದ ವರ್ಷ ಸಹ ಇದೇ ರೀತಿ ಆನೆ ದಾಳಿ ನಡೆದಿದ್ದು ಆಗ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಅಧಿಕಾರಿಗಳ ಭರವಸೆಯಿಂದಾಗಿ ನಮ್ಮ ರೈತರು ಶಾಶ್ವತ ಪರಿಹಾರ ದೊರಕಿತು ಎಂದು ನಿಟ್ಟುಸಿರು ಬಿಡುವ ಮುನ್ನವೇ ಪುನಃ ಆನೆಗಳು ಒಕ್ಕರಿಸಿಕೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಜಿ ಸಚಿವ ಹರತಾಳು ಹಾಲಪ್ಪ, ಶಾಸಕ ಆರಗ ಜ್ಞಾನೇಂದ್ರ, ಡಿ.ಎಸ್. ಅರುಣ್, ಡಾ.ಧನಂಜಯ ಸರ್ಜಿ, ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್, ಮುಖಂಡರಾದ ಟಿ.ಡಿ.ಮೇಘರಾಜ್, ಹೊನಗೋಡು ರತ್ನಾಕರ್, ಸುರೇಶ್ ಸ್ವಾಮಿರಾವ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ಕೆರೆಹಳ್ಳಿ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಸತೀಶ್, ಇನ್ನಿತರ ರೈತಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲ್ಲಿದ್ದಾರೆಂದು ತಿಳಿಸಿದರು.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1Ezh7iA8Tp/
ಸುದ್ದಿಗೋಷ್ಟಿಯಲ್ಲಿ ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಸತೀಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎನ್.ವರ್ತೇಶ್, ಮೆಣಸೆ ಆನಂದ, ಗ್ರಾಮ ಪಂಚಾಯಿತ್ ಸದಸ್ಯ ಹೆಚ್.ಎಸ್. ಸುಂದರೇಶ್, ಜಿ.ಡಿ.ಮಲ್ಲಿಕಾರ್ಜುನ, ರಾಜೇಶ್ ಬುಕ್ಕಿವರೆ, ಮಹ್ಮದ್, ಸುಧೀರ್ ಕೋಟೆತಾರಿಗ ಇನ್ನಿತರರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





