ಹೊಸನಗರ ; ಬ್ರಾಹ್ಮಣರ ಮೇಲಿನ ತೇಜೋವಧೆ ಖಂಡಿಸಿ ಏ. 21ಕ್ಕೆ ಬೃಹತ್ ಪ್ರತಿಭಟನೆ

Written by Mahesha Hindlemane

Published on:

ಹೊಸನಗರ ; ರಾಜ್ಯದ ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇತ್ತೀಚೆಗೆ CET ಪರೀಕ್ಷೆ ಬರೆಯುವ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕಿತ್ತು ತೆಗೆದ ಪರೀಕ್ಷಾ ಮೇಲ್ವಿಚಾರಕರು ಮತ್ತು ಅಲ್ಲಿನ ಜಿಲ್ಲಾಡಳಿತದ ವಿರುದ್ಧ ಇದೇ ಏಪ್ರಿಲ್ 21ರ ಸೋಮವಾರ ಹೊಸನಗರ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಪಟ್ಟಣದ ಗಾಯತ್ರಿ ಮಂದಿರದಿಂದ ತಾಲ್ಲೂಕು ಕಛೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. 

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ತೇಜೋವಧೆ ಮಿತಿಮೀರುತ್ತಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಅಂದು ಮುಂದಿನ ಹೋರಾಟದ ಬಗ್ಗೆ ರೂಪುರೇಷೆ  ರೂಪಿಸಲಾಗುವುದು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಾಜಿ ನಿರ್ದೇಶಕ, ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿ  ಕೆ.ಎನ್.ಸ್ವರೂಪ್ ತಿಳಿಸಿದ್ದಾರೆ.

Leave a Comment