ಹೊಸನಗರ ; ಮಳೆ(ಲೆ)ನಾಡಿನ ತವರೂರು ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನ ಎಲ್ಲೆಡೆ ಬಿರುಗಾಳಿ ಸಹಿತ ಜೋರು ಮಳೆಯಾಗುತ್ತಿದ್ದು ಶನಿವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಮಾಸ್ತಿಕಟ್ಟೆಯಲ್ಲಿ 14.5 ಸೆಂ.ಮೀ. ಅತ್ಯಧಿಕ ಮಳೆ ದಾಖಲಾಗಿದೆ.
ಉಳಿದಂತೆ ಹುಲಿಕಲ್ 14 ಸೆಂ.ಮೀ. ಸಾವೇಹಕ್ಲು 9, ಮಾಣಿ 7 ಮತ್ತು ಯಡೂರಿನಲ್ಲಿ 6 ಸೆಂ.ಮೀ. ಮಳೆ ದಾಖಲಾಗಿದೆ.
ಶರಾವತಿ ನದಿಯ ದಡದ ಹಳ್ಳ-ಕೊಳ್ಳಗಳು ಭರ್ತಿಯಾಗಿದೆ. ಭಾರಿ ಗಾಳಿ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು ಪಟ್ಟಣದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದೆ. ವರ್ಕ್ ಫ್ರಂ ಹೋಮ್ ಕೆಲಸಗಾರರ ಪಾಡು ಹೇಳ ತೀರದಂತಾಗಿದೆ.
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ ಇಂದು ಬೆಳಗ್ಗೆ 8:00 ಗಂಟೆಗೆ 1763.65 ಅಡಿ ತಲುಪಿದ್ದು ಕಳೆದ ವರ್ಷ ಇದೇ ಅವಧಿಗೆ 1747.05 ಅಡಿ ದಾಖಲಾಗಿತ್ತು. ಜಲಾಶಯ ಪ್ರದೇಶದಲ್ಲಿ 5 ಸೆಂ.ಮೀ. ಮಳೆಯಾಗಿದ್ದು ಜಲಾಶಯಕ್ಕೆ 7145 ಕ್ಯೂಸೆಕ್ ನೀರು ಹರಿದು ಬರುತ್ತಿದೆ.