ಗಣೇಶ ಹಬ್ಬದ ಅಂಗವಾಗಿ ಆ.27 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

Written by Koushik G K

Published on:

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ತಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಮಾಂಸ ಮಾರಾಟ ನಿಷೇಧಿಸಲಾಗಿದೆ. ನಗರದ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಹಾನಗರ ಪಾಲಿಕೆಯ ಆಯುಕ್ತರು ನೀಡಿರುವ ಪ್ರಕಟಣೆಯ ಪ್ರಕಾರ, ನಗರದ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಮಾಂಸ ಅಂಗಡಿಗಳು ವ್ಯವಹಾರಗಳನ್ನು ಆ ದಿನಕ್ಕೆ ಬಂದ್ ಮಾಡಲು ಸೂಚಿಸಲಾಗಿದೆ. “ಗಣೇಶ ಹಬ್ಬವು ನಗರದಲ್ಲಿ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ಸೌಹಾರ್ದದ ವಾತಾವರಣವನ್ನು ತರುತ್ತದೆ. ಇಂತಹ ಸಂದರ್ಭಗಳಲ್ಲಿ ಯಾವುದೇ ರೀತಿಯ ಅಸಮಾಧಾನ ಅಥವಾ ಅಸೌಕರ್ಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ” ಎಂದು ಆಯುಕ್ತರು ತಿಳಿಸಿದ್ದಾರೆ.

ಆ.27 ರಂದು ನಗರದ ವಿವಿಧೆಡೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹೆಚ್ಚಿನ ಜನರು ಹಬ್ಬದ ಉತ್ಸವದಲ್ಲಿ ಭಾಗವಹಿಸುವುದರಿಂದ, ಜನಸಂದಣಿ ಹೆಚ್ಚುವ ನಿರೀಕ್ಷೆಯಿದೆ. ಇಂತಹ ಸಂದರ್ಭದಲ್ಲಿ ಮಾಂಸ ಅಂಗಡಿಗಳು ತೆರೆದಿದ್ದರೆ ಹಬ್ಬದ ವಾತಾವರಣಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಮಾಂಸ ಮಾರಾಟಗಾರರು ಮತ್ತು ಕಸಾಯಿ ಖಾನೆ ಮಾಲೀಕರು ಸಹಕರಿಸುವಂತೆ ಪಾಲಿಕೆ ಮನವಿ ಮಾಡಿದೆ.

Meat sale banned in Shivamogga on August 27

Leave a Comment