ಹೊಸನಗರ ; ರಾಜ್ಯದಲ್ಲಿ ಬಹುತೇಕ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳು ಖಾಲಿಯಾಗಿದ್ದು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬಡ ರೋಗಿಗಳು ಪರದಾಡುವಂತಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎನ್. ಸುಧಾಕರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಬದಲು ವೈದ್ಯರು ಹೊರ ಮೆಡಿಕಲ್ ಶಾಪ್ ಗೆ ಚೀಟಿ ಬರೆದು ಕೊಡುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ, ಹೊರಗೆ ಔಷಧಿ ಚೀಟಿ ಬರೆಯುವ ಹಾಗಿಲ್ಲ. ಒಳಗೆ ಔಷಧ ಲಭ್ಯತೆ ಇಲ್ಲ ಎನ್ನುವ ಸಂಧಿಗ್ದ ಸ್ಥಿತಿಯನ್ನು ವೈದ್ಯರು ಎದುರಿಸುತ್ತಿದ್ದಾರೆ. ಇದು ಆರೋಗ್ಯ ಇಲಾಖೆ ಬಡಜನರ ಬದುಕಿನಲ್ಲಿ ಚೆಲ್ಲಾಟ ಆಡುವಂತಿದೆ. ಈ ಕೂಡಲೇ ಸರ್ಕಾರ ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

