ಅಪರಾಧ ಸುದ್ದಿ

ಪೊಲೀಸರ ಭರ್ಜರಿ ಬೇಟೆ ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಆರೋಪಿಗಳು ಅಂದರ್ !

SHIVAMOGGA ; ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇತ್ತೀಚೆಗೆ ನ. 1 ರಂದು ಮಧ್ಯಾಹ್ನ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರೂ. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಆರೋಪಿತಳನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವ ಮೊಗ್ಗದ ಕಾಶಿಪುರ ನಿವಾಸಿ ಯಾದ ಪ್ರಭಾವತಿ (43) ತಮ್ಮ ಮನೆಗೆ ಬಂಗಾರದ ಆಭರಣಗಳಿದ್ದ ಕಿಟ್ ಬ್ಯಾಗ್ ಹಾಗೂ ಇತರ ವಸ್ತುಗಳಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬಸ್ ನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಶಿವಮೊಗ್ಗದಲ್ಲಿ ಬಸ್ ಇಳಿಯುವಾಗ ಬಂಗಾರದ ಆಭರಣಗಳಿದ್ದ ಕಿಟ್ ಬ್ಯಾಗ್ ನಾಪತ್ತೆಯಾಗಿತ್ತು. ಸದರಿ ಬ್ಯಾಗ್ ನಲ್ಲಿ 20 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ಎರಡು ರೇಷ್ಮೆ ಸೀರೆಗಳು ಕಳುವಾಗಿದ್ದು ಈ ಬಗ್ಗೆ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಮಲಮ್ಮ

ಈ ಸಂಬಂಧ ಭದ್ರಾವತಿ ಪೊಲೀಸ್ ವೃತ್ತ ನಿರೀಕ್ಷಕ ಶೈಲ ಕುಮಾರ್, ಪಿಎಸ್‌ಐ ಟಿ. ರಮೇಶ್, ಎಎಸ್‌ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ಹಾಲಪ್ಪ, ಮಧು ಪ್ರಸಾದ್, ಮೌನೇಶ್, ಪ್ರಸನ್ನ, ದಿವ್ಯಶ್ರೀ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ನ. 3 ರಂದು ಈ ತಂಡ ಪ್ರಕರಣದ ಆರೋಪಿತಳಾದ ಸೀಗೆಬಾಗಿ ನಿವಾಸಿ ಅಟೆಂಡರ್ ಕೆಲಸ ಮಾಡುವ ಕಮಲಮ್ಮ(48) ರನ್ನು ಬಂಧಿಸಿ ಮಾಡಿ ಕಳವು ಮಾಡಿದ್ದ ಆಭರಣ ಮತ್ತು ರೇಷ್ಮೆ ಸೀರೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಗಿದೆ ಎಂದರು.

ಭದ್ರಾವತಿ ಹೊಸ ಮನೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮನೆಗಳತನ ಪ್ರಕರಣದ ಆರೋಪಿಯನ್ನು ಬಂಧಿಸಿ, ಸುಮಾರು 16.50 ಲಕ್ಷ ರೂ. ಮೌಲ್ಯದ 259 ಗ್ರಾಂ ಚಿನ್ನಾಭರಣ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸಮನೆ ಭದ್ರಾವತಿ ನಿವಾಸಿ, ಜಿ.ಆರ್.ವಿನೋದ್ ಅವರು ಆಗಸ್ಟ್ 15ರಂದು ಊರಿಗೆ ಹೋಗಿದ್ದು, ಆಗಸ್ಟ್ 21ರಂದು ಮನೆಗೆ ಮರಳಿ ಬಂದು ನೋಡಿದಾಗ ಬೀರುವಿನಲ್ಲಿಟ್ಟಿದ್ದ 20 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನಾಭರಣಗಳು ಕಳುವಾಗಿರುವುದು ಗೊತ್ತಾಗಿತ್ತು. ಅವರು ಭದ್ರಾವತಿಯ ಹೊಸ ಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ನಿತಿನ್

ಆರೋಪಿಗಳ ಪತ್ತೆಗಾಗಿ ಭದ್ರಾವತಿ ಡಿವೈಎಸ್ಪಿ,ನಾಗರಾಜ್, ಸಿಪಿಐ ಶ್ರೀಶೈಲ ಕುಮಾರ, ಪಿಎಸ್ಐ ಕೃಷ್ಣಕುಮಾರ್ ಬಿ ಮಾನೆ, ಮತ್ತು ಸಿಬ್ಬಂದಿಗಳಾದ ಮಧುಕುಮಾರ್, ಆದರ್ಶ ಶೆಟ್ಟಿ, ತೇಜಕುಮಾರ್, ಅವರನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿದ್ದು, ಈ ತನಿಖಾ ತಂಡ, ನವೆಂಬರ್ ಮೂರರಂದು ಈ ಪ್ರಕರಣದ ಆರೋಪಿಯಾದ, ಎಸ್.ಎಸ್.ನಿತಿನ್ (27) ಐಟಿ ಉದ್ಯೋಗಿ ನಿವಾಸಿ ಅವರನ್ನು ಬಂಧಿಸಿ, ಆರೋಪಿತನಿಂದ 16 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬ್ಯಾಂಕ್, ಎಟಿಎಂಗಳ ಭದ್ರತೆಗೆ ಸಂಬಂಧಿಸಿದಂತೆ, ಬ್ಯಾಂಕ್ ಅಧಿಕಾರಿಗಳ ವಿಶೇಷ ಸಭೆ ಕರೆಯಲಾಗಿದೆ ಎಂದರು.

ಹೆಚ್ಚುವರಿ ಪೋಲಿಸ್ ಅಧೀಕ್ಷಕ ಅನಿಲ್ ಕುಮಾರ್, ಎ.ಜಿ. ಕಾರ್ಯಪ್ಪ ಉಪಸ್ಥಿತರಿದ್ದರು.

ಬಂಧಿತ ಆರೋಪಿ ಚಿನ್ನಾಭರಣಗಳನ್ನು ಕರಗಿಸಿ, ಚಿನ್ನದ ಗಟ್ಟಿಗಳನ್ನಾಗಿ ಮಾಡಿಕೊಂಡಿದ್ದ ಒಟ್ಟು, 259 ಗ್ರಾಂ ತೂಕದ ಆರು ಬಂಗಾರದ ಗಟ್ಟಿಗಳು ಮತ್ತು ಬಂಗಾರದ ಕೈ ಕಡಗವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸದರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!