Mini tractor subsidy :2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಮತ್ತು ಹನಿ ನೀರಾವರಿ ಯೋಜನೆಯಡಿ ರೈತರಿಗೆ ಮಿನಿ ಟ್ರ್ಯಾಕ್ಟರ್ ಸೇರಿದಂತೆ ಹಲವಾರು ಘಟಕಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಉತ್ತರ ಕನ್ನಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.
ಮಿನಿ ಟ್ರ್ಯಾಕ್ಟರ್, ಪಾಲಿಹೌಸ್, ಹನಿ ನೀರಾವರಿ ಸಹಾಯಧನ ಲಭ್ಯವಾಗಲಿದೆ. ಶೇ 50ರಿಂದ 90ರವರೆಗೆ ಸಬ್ಸಿಡಿ ಯನ್ನು ಸಹ ನೀಡಲಾಗುವುದು. ವಿಶೇಷವಾಗಿ ಮಿನಿ ಟ್ರ್ಯಾಕ್ಟರ್,ಪಾಲಿಹೌಸ್, ಹೂವಿನ ಬೆಳೆಯ ವಿಸ್ತರಣೆ, ಜೇನುಪೆಟ್ಟಿಗೆ, ಪವರ್ ಟಿಲ್ಲರ್, ಈರುಳ್ಳಿ ಶೇಖರಣಾ ಘಟಕ ಇತ್ಯಾದಿ ಘಟಕಗಳಿಗೆ ರೈತರು ಅನುದಾನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷ ಸೂಚನೆ ಹೆಚ್ಚಿನ ಅನುದಾನಕ್ಕಾಗಿ ರೈತರು ಪ್ರಸ್ತುತ ತನ್ನ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕಾ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದರೇ ಆಧಾರ್ ಕಾರ್ಡ್, ಜಮೀನು ದಾಖಲೆ ಆರ್ಟಿಸಿ, ಫೋಟೋ, ನೀರಾವರಿ ಮೂಲದ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ಬುಕ್ ಮುಂತಾದ ದಾಖಲೆಗಳನ್ನು ಹೊಂದಿರಬೇಕು. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ರೈತರಿಗೆ ಶೇ 50 ರಿಂದ ಶೇ 90ರವರೆಗೆ ಸಹಾಯಧನವನ್ನು ನೀಡಲಾಗುತ್ತದೆ. ಇಂತಹ ಸಬ್ಸಿಡಿ ಯೋಜನೆಯು ಸಣ್ಣ ರೈತರಿಗೆ ಅನುಕೂಲಕರವಾಗಲಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಈ ಯೋಜನೆಯು ತೋಟಗಾರಿಕೆ ಬೆಳೆಗಳನ್ನು ಬೆಳೆಸುವ ಮತ್ತು ಬೆಳೆಯಲು ಆಸಕ್ತರಾಗಿರುವ ರೈತರಿಗೆ ಉತ್ತಮ ಅವಕಾಶವಾಗಿದೆ. ಹನಿ ನೀರಾವರಿ ಘಟಕದ ಅಡಿಯಲ್ಲಿ ಹಣ್ಣು ಹಾಗೂ ತರಕಾರಿ ಬೆಳೆಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಸಬ್ಸಿಡಿ ದೊರೆಯುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೇ ತಮ್ಮ ಹೆಸರಿನಲ್ಲಿ ಜಮೀನು ಇರಬೇಕು, ನೀರಾವರಿ ಸೌಲಭ್ಯವನ್ನು ಹೊಂದಿರುವವರು ಆಗಿದ್ದು ಖಾಯಂ ಕರ್ನಾಟಕದ ನಿವಾಸಿಯಾಗಿರಬೇಕು. ವಿಶೇಷವಾಗಿ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ, ಮಹಿಳೆಯರಿಗೆ, ಅಲ್ಪಸಂಖ್ಯಾತರು ಮತ್ತು ಅಂಗವಿಕಲರಿಗೆ ಮೀಸಲಾತಿಯ ಸೌಲಭ್ಯವಿದೆ.
Read More
ಶಿವಮೊಗ್ಗ- ಮೈಸೂರು ಎಕ್ಸ್ಪ್ರೆಸ್ ರೈಲಿನ ಲೇಟೆಸ್ಟ್ ಅಪ್ಡೇಟ್ !
FASTag ವಾರ್ಷಿಕ ಪಾಸ್ : ಏನಿದು? ಪ್ರಸ್ತುತ ಬಳಕೆದಾರರ ಮೇಲೆ ಎಫೆಕ್ಟ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ರೈತರಿಗೋಸ್ಕರ ಬರೋಬ್ಬರಿ ಶೇ 90ರಷ್ಟು ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ಸೆಟ್ ವಿತರಣೆ!ಇಂದೇ ಅಪ್ಲೈ ಮಾಡಿರಿ.
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.