ಹೊಸನಗರ : 2025-26ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಭತ್ತ ಖರೀದಿಗಾಗಿ ಏಜೆನ್ಸಿ ನೇಮಿಸಿ ಆದೇಶ ಹೊರಡಿಸಿದೆ.
ರೈತರು ಬೆಳೆದ ತಲಾ ಒಂದು ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 2369 ರೂ. ಹಾಗೂ ‘ಎ’ ಗ್ರೇಡ್ ಭತ್ತಕ್ಕೆ 2389 ರೂ. ನಿಗದಿ ಪಡಿಸಿದೆ.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ತೀರ್ಮಾನದಂತೆ ಜಿಲ್ಲೆಯ ಆಯಾ ತಾಲೂಕು ಕೇಂದ್ರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಇರುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಏಜೆನ್ಸಿ ಕೇಂದ್ರದಲ್ಲಿ ಭತ್ತ ಖರೀದಿ ನಡೆಯಲಿದೆ.
ಭತ್ತ ಖರೀದಿಗೆ ಸರ್ಕಾರ ಕೆಲವು ಗುಣಮಟ್ಟ ನಿಗದಿ ಪಡಿಸಿದ್ದು, ರೈತಾಪಿಗಳು ತಮ್ಮ ಹೆಸರು ನೊಂದಣಿಗೆ ಇದೇ ಸೆ.15 ರಿಂದ ಅ.31ರವರೆಗೆ ಅವಕಾಶ ಕಲ್ಪಿಸಲಾಗಿದೆ.
ನಂತರ, ಭತ್ತ ಖರೀದಿ ಪ್ರಕ್ರಿಯೆ ಇದೇ ನ.1ರಿಂದ 2026ರ ಫೆ.28 ರವರೆಗೆ ಚಾಲ್ತಿಯಲ್ಲಿ ಇರುತ್ತದೆ ಎಂದು ಶಿವಮೊಗ್ಗ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





