Shivamogga

03 ಎಕರೆಗಿಂತ ಕಡಿಮೆ ಸಾಗುವಳಿ ಮಾಡಿದ ರೈತರಿಗೆ ನೋಟಿಸ್ ನೀಡುವುದು, ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆಗೆ ಸೂಚನೆ ; ಸಚಿವ ಮಧು ಬಂಗಾರಪ್ಪ

SHIVAMOGGA ; 2015ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುವುದು, ನೋಟಿಸ್ ನೀಡುವುದಾಗಲಿ ಮಾಡಬಾರದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಂದು ಲೋಕೋಪಯೋಗಿ ಭವನದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಕೋರ್ಟ್ ಪ್ರಕರಣ, ಲೋಕಾಯುಕ್ತ ಪ್ರಕರಣಗಳನ್ನು ಹೊರತುಪಡಿಸಿ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ನೀಡುವಂತಿಲ್ಲ. ಸಣ್ಣ ಹಿಡುವಳಿದಾರರಿಗೆ ಯಾವುದೇ ರೀತಿಯಲ್ಲಿ ತೊಂದರೆ ಮಾಡಬಾರದು. 3 ಎಕರೆಗಿಂತ ಹೆಚ್ಚಿನ ಭೂಮಿ ಸಾಗುವಳಿ ಮಾಡುತ್ತಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಗ್ರಾಮಗಳಲ್ಲಿ ಗ್ರಾಮ ಸಭೆ ಮಾಡಿ ಸಾಗುವಳಿದಾರರು, ಅವರ ಜಮೀನಿನ ಕುರಿತು ಮಾಹಿತಿ ತೆಗೆದುಕೊಳ್ಳಬೇಕು. ಬಗರ್‌ಹುಕುಂ ಸಮಸ್ಯೆಗಳನ್ನು ನಿರ್ವಹಿಸಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಯುಜಿಡಿ ಅನುದಾನಕ್ಕೆ ಪ್ರಸ್ತಾವನೆ :

ಯುಜಿಟಿ ಕಾಮಗಾರಿ ಕೈಗೊಳ್ಳಲು ಆನವಟ್ಟಿಗೆ ರೂ.138 ಕೋಟಿ ಮತ್ತು ಸೊರಬಕ್ಕೆ 180.5 ಕೋಟಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಶಿವಮೊಗ್ಗ ನಗರಕ್ಕೆ ಈಗಾಗಲೇ ರೂ.40 ಕೋಟಿ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.

ಜಿಲ್ಲೆಯ ಯಾವುದೇ ಬೃಹತ್, ಸಣ್ಣ ನೀರಾವರಿ ಕಾಮಗಾರಿಗಳು ಬಾಕಿ ಇದ್ದಲ್ಲಿ, ಅವುಗಳ ಅನುಸರಣೆ ಕೈಗೊಂಡು, ಸಮಸ್ಯೆ ಇದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.

ಟರ್ಬಿಡಿಟಿ ನೀರು ಕ್ರಮ :

ಶಿವಮೊಗ್ಗ ನಗರದಲ್ಲಿ ಮಳೆ ಬಂದ ನಂತರ ಕುಡಿಯುವ ನೀರು ಕೆಂಪಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಪ್ರಸ್ತುತ ಡ್ಯಾಂನಿಂದ 35 ಕ್ಯುಸೆಕ್ ಮತ್ತು ನದಿಯಿಂದ 10 ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ. ನದಿ ನೀರು ಕೆಂಪಾಗಿದ್ದು, ಈ 10 ಕ್ಯುಸೆಕ್ ನೀರನ್ನೂ ಡ್ಯಾಂ ನಿಂದಲೇ ಬಿಟ್ಟರೆ ಟರ್ಬಿಡಿಟಿ ನೀರನ್ನು ನಿಯಂತ್ರಿಸಬಹುದೆಂದು ಕಾರ್ಯಪಾಲಕ ಅಭಿಯಂತರರು ತಿಳಿಸಿದರು.

ಸಚಿವರು ಪ್ರತಿಕ್ರಿಯಿಸಿ, ಮಳೆಗಾಲದಲ್ಲಿ ಡ್ಯಾಂ ತುಂಬಿರುವ ಕಾರಣ 10 ಕ್ಯುಸೆಕ್ ನೀರನ್ನು ಡ್ಯಾಂ ನಿಂದ ಬಿಡಬಹುದು. ಈ ಬಗ್ಗೆ ಕ್ರಮ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಬೃಹತ್, ಸಣ್ಣ ನೀರಾವರಿ, ಅರಣ್ಯ ಇಲಾಖೆ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಾಗರ ಉಪವಿಭಾಗಾಧಿಕಾರಿ ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>