ಬಾಳೆಹೊನ್ನೂರು ; ರಾಜ್ಯದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಗುರುವಾರ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದರು.
ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಹಾಗೂ ಯುಗಪುರುಷ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಪೂಜೆ ಸಲ್ಲಿಸಿದ ನಂತರ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಸೇರಿದಂತೆ ರಾಜಕೀಯ ಧುರೀಣರು ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





