ಅಪರಾಧ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ !

RIPPONPETE ; ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿ ಸಿಲುಕಿ, ನಂತರ ಮದುವೆಯಾಗುವುದಿಲ್ಲವೆಂದು ವಂಚಿಸಿರುವ ಪ್ರಿಯಕರನ ಮಾತು ಹಾಗೂ ಮನೆಯವರ ಜಾತಿ ನಿಂದನೆಯ ಅವಾಚ್ಯ ಪದಗಳಿಂದ ಮನನೊಂದ ಅಪ್ರಾಪ್ತೆಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಅದೇ ಗ್ರಾಮದ ವಾಸಿ ತೇಜಪ್ಪ (22) ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗುವಂತೆ ಪ್ರಿಯತಮೆ ಕೇಳಿದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಪ್ರಿಯತಮೆ ಮತ್ತು ಪೋಷಕರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆ ಸಂದರ್ಭದಲ್ಲಿ ಹುಡುಗನ ಪೋಷಕರು ಹಾಗೂ ಇನ್ನಿತರರು ಹುಡುಗಿಯ ಜಾತಿಯನ್ನು ಪ್ರಸ್ತಾಪಿಸಿ ಮದುವೆ ಮಾಡಿಸಲು ಸಾಧ್ಯವಿಲ್ಲವೆಂದು ವಿರೋಧಿಸಿ ‘ನಡೆದ ಘಟನೆಗಳಿಗೆ ನಾವು ಕಾರಣರಲ್ಲ. ನೀನು ಎಲ್ಲಿಯಾದರೂ ಹೋಗಿ ಸಾಯಿ’ ಎಂದು ಬೆದರಿಸಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದು ಅಪ್ರಾಪ್ತೆ ನ. 19 ರಂದು ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಮನೆಯಲ್ಲಿ ಕಳೆನಾಶಕ ಸೇವಿಸಿದ್ದಾಳೆ. ವಿಷಯ ತಿಳಿದ ತಾಯಿ ಪುತ್ರಿಯ ಚಿಕಿತ್ಸೆಗೆ ಆನಂದಪುರ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ. 21 ರ ರಾತ್ರಿ ಬಾಲಕಿ ಮೃತಪಟ್ಟಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ ಮೃತ ಬಾಲಕಿಯ ತಾಯಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ತೇಜಪ್ಪ, ತಿಮ್ಮಪ್ಪ, ಲೋಲಾಕ್ಷಮ್ಮ, ತುಂಗಮ್ಮ, ಕುಮಾರ, ಕಾರ್ತಿಕ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!