SORABA ; ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಬೋವಿ ಕಾಲೋನಿಯಲ್ಲಿ ಶುಕ್ರವಾರ ಬೆಳಗಿನಜಾವ ನಡೆದಿದೆ.
ಬೋವಿ ಕಾಲೋನಿ ನಿವಾಸಿ ದುರ್ಗಪ್ಪ ಬೋವಿ ಎಂಬುವವರಿಗೆ ಸೇರಿದ ಬೈಕಿಗೆ ಬೆಳಗಿನಜಾವ 5 ಗಂಟೆ ಸುಮಾರಿಗೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ನೆರೆ ಮನೆಯ ನಿವಾಸಿಗಳು ಬೆಂಕಿಯ ತೀವ್ರತೆ ಗಮನಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಭಾಗಶಃ ಬೈಕ್ ಸುಟ್ಟು ಹೋಗಿದೆ.

ಬೈಕಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದುರ್ಗಪ್ಪ ಅವರ ಪುತ್ರ ಶ್ರೀಧರ್ ಒತ್ತಾಯಿಸಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.