ಕಳಸ ; ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ನಡೆದಿದೆ.
ಶ್ರೇಯಸ್ (16) ಮೃತ ವಿದ್ಯಾರ್ಥಿ. ಕಳಸ ಪಟ್ಟಣದ ಖಾಸಗಿ ಶಾಲೆಯಲ್ಲಿ ಶ್ರೇಯಸ್ ವ್ಯಾಸಂಗ ಮಾಡುತ್ತಿದ್ದ. ಮೂಲತಃ ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿದ್ದಾನೆ. ಕಳಸ ಪಟ್ಟಣದ ಚಿಕ್ಕಪ್ಪನ ನಿವಾಸದಲ್ಲಿ ವಾಸವಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಕಳಸ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಸದ್ಯ ಶ್ರೇಯಸ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು ಭದ್ರಾ ನದಿಯಿಂದ ಶ್ರೇಯಸ್ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ.