Chikkamagaluru

ಸಿ.ಟಿ ರವಿ ಬಂಧನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CHIKKAMAGALURU ; ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಸ್ವಯಂ ಪ್ರೇರಿತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಗರದ ಪ್ರಮುಖ ರಸ್ತೆ ಎಂ.ಜಿ. ರಸ್ತೆಯ ಕೆಲವು ಅಂಗಡಿ ಮುಂಗಟ್ಟು ಮಾಲಿಕರು ಸ್ವಯಂ ಪ್ರೇರಿತವಾಗಿ ವ್ಯಾಪಾರ, ವಹಿವಾಟು ಬಂದ್‌ಗೊಳಿಸಿ ಬಂದ್‌ಗೆ ಬೆಂಬಲ ನೀಡಿದರೆ, ಉಳಿದಂತೆ ಬಹುತೇಕ ಅಂಗಡಿ ಮುಂಗಟ್ಟು ಮಾಲಿಕರು ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದರು.

ಬೆಳಗ್ಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಪೊಲೀಸರ ನಡೆಯನ್ನು ಮುಖಂಡರು ಖಂಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಬಂದ್ ಪ್ರತಿಭಟನೆ ಹಿನ್ನಲೆ ನಗರದ ಹನುಮಂತಪ್ಪ ವೃತ್ತ ಸೇರಿದಂತೆ ಆಯಾ ಕಟ್ಟಿನ ಜಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಪ್ರತಿಭಟನೆಗೆ ಹಾಗೂ ಬಂದ್‌ಗೆ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಅಲ್ಲಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಘಟನೆಗಳು ನಡೆದಿವೆ.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುವ ವೇಳೆ ಹನುಮಂತಪ್ಪ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಬಂದ ಬಿಜೆಪಿ ಕಾರ್ಯಕರ್ತರ ನಡುವೆ ಆಜಾದ್ ಪಾರ್ಕ್ ವೃತ್ತದಲ್ಲಿ ತಳ್ಳಾಟ ನೂಕಾಟ ನಡೆಯಿತು. ಈ ವೇಳೆ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು.

ನಗರದ ವಿವಿಧೆಡೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿರುವ ಘಟನೆಗಳು ನಡೆದಿದ್ದು ಈ ವೇಳೆ ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆಯಲಾಯಿತು. ರಾಮನಹಳ್ಳಿಯಲ್ಲಿ ಬೈಕಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಜಿಲ್ಲೆಯ ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ, ಕಡೂರು ತಾಲೂಕಿನಲ್ಲಿ ಪ್ರತಿಭಟನೆ ಕಾವು ಜಾಸ್ತಿಯಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>