HOSANAGARA | ಈ ಬಾರಿಯ ನೆರೆಹಾವಳಿ ವೇಳೆ ಕಾಲುಸಂಕ ದಾಟುವಾಗ ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ತಾಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈಸೆ ಗ್ರಾಮದ ಶ್ರೀಧರಪುರ ನಿವಾಸಿ ಶಶಿಕಲಾ ಕುಟುಂಬಕ್ಕೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ 5 ಲಕ್ಷ ರೂ. ಮೌಲ್ಯದ ಪರಿಹಾರದ ಚೆಕ್ ವಿತರಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ಶುಕ್ರವಾರ ತಾಲೂಕಿನ ಕರಿಮನೆ ಗ್ರಾಮದ ರೈತ ಎನ್.ಟಿ. ತಿಮ್ಮಪ್ಪ ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಕುಟುಂಬಕ್ಕೂ ಶೀಘ್ರದಲ್ಲೇ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಈ ವೇಳೆ ತಹಶೀಲ್ದಾರ್ ರಶ್ಮಿ, ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಕೆ.ವಿ.ಸುಬ್ರಹ್ಮಣ್ಯ, ಉಪಾಧ್ಯಕ್ಷ ನರ್ತಿಗೆ ಸುರೇಶ್, ನಗರ ಶಕ್ತಿ ಕೇಂದ್ರದ ಅಧ್ಯಕ್ಷ ಹೆಬ್ಬುರಳಿ ರಮಾಕಾಂತ್, ಪ್ರಮುಖರಾದ ಬೈಸೆ ಅರುಣ್, ಶಾಸಕರ ಆಪ್ತ ಕಾರ್ಯದರ್ಶಿ ಹೊದ್ಲ ಬಸವರಾಜ್, ರಾಜೇಶ್ ಹಿರಿಮನೆ, ಆನಂದ್ ಗುಡ್ಡೇಕೊಪ್ಪ, ಮಾರುತಿ, ರಮೇಶ್, ಮೃತರ ಪುತ್ರರಾದ ಸುದೀಪ್, ಸುಮಂತ್ ಹಾಗೂ ಕುಟುಂಬ ವರ್ಗ ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.