ಹೊಸನಗರ ; ಅಪರಾಧ ಕೃತ್ಯಗಳು ನಡೆಯದಂತೆ ತಡೆಗಟ್ಟಲು ಸೂಕ್ತ ವೇಳೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ತೆರಳಬೇಕಾದ ಅಗತ್ಯತೆ ಮನಗಂಡು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಸಜ್ಜಿತ ನೂತನ ಜೀಪ್ ಅನ್ನು ಇಲಾಖೆ ಹಸ್ತಾಂತರ ಮಾಡಲಾಗುತ್ತಿದೆ ಎಂದು ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ವೃತ್ತ ನಿರೀಕ್ಷಕ ಗೌಡಪ್ಪಗೌಡ ಅವರಿಗೆ ಕೀ ಹಸ್ತಾಂತರ ಮಾಡಿ ಮಾತನಾಡಿದರು.
ಕಳೆದ ಬಾರಿ ಕ್ಷೇತ್ರ ರಿಪ್ಪನ್ಪೇಟೆ, ಆನಂದಪುರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಹೊಸ ಜೀಪ್ ಗಳನ್ನು ನೀಡಿದ್ದೆ. ಬೇಡಿಕೆ ಮೇರೆಗೆ ಈ ಬಾರಿ ಹೊಸನಗರ ಠಾಣೆ ಜೀಪ್ ಅನ್ನು ಹಸ್ತಾಂತರಿಸಿದೆ. ಇಲಾಖಾ ಸಿಬ್ಬಂದಿಗಳ ಯಾವುದೇ ತರಹದ. ಅಗತ್ಯ ಕುಂದುಕೊರತೆಗಳ ನಿವಾರಣೆಗೆ ತಾವು ಸದಾ ಬದ್ದ ಇರುವುದಾಗಿ ಅವರು ತಿಳಿಸಿದರು.
ಈ ವೇಳೆ ಸಬ್ಇನ್ಸ್ಪೆಕ್ಟರ್ ಶಂಕರಗೌಡ ಪಾಟೀಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡೂರು ಚಂದ್ರಮೌಳಿ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಪ್ರಮುಖರಾದ ಕಳೂರು ಶ್ರೀ ರಾಮೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದುಮ್ಮ ವಿನಯ್ ಕುಮಾರ್, ಬಿ.ಆರ್. ಪ್ರಭಾಕರ್, ಹಿಟಾಚಿ ಶ್ರೀಧರ್, ಬಸವರಾಜ್ ಗಗ್ಗ, ಜಯನಗರ ಗೋಪಿ, ಗುರು ಮೊದಲಾದವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





