ಹೊಸನಗರ

HOSANAGARA ; ಸುಸಜ್ಜಿತ ಆಟದ ಮೈದಾನ ನಿರ್ಮಾಣ ಹಾಗೂ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ; ಶಾಸಕ ಬೇಳೂರು

HOSANAGARA ; ಒಂದು ವರ್ಷದಲ್ಲಿ ಹೊಸನಗರದ ನೆಹರು ಮೈದಾನಕ್ಕೆ ಶೌಚಾಲಯದಿಂದ ಹಿಡಿದು 18ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸುಸಜ್ಜಿತ ಆಟದ ಮೈದಾನ ಹಾಗೂ ಹೊಸನಗರ ತಾಲ್ಲೂಕಿನ ಎಲ್ಲ ಪ್ರಾಥಮಿಕ ಶಾಲೆಗಳಿಗೆ ದೈಹಿಕ ಶಿಕ್ಷಕರನ್ನು ನೇಮಿಸುವ ಕಾರ್ಯ ಮಾಡುತ್ತೇನೆ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ನೆಹರು ಮೈದಾನದಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಶಾಲಾ ಶಿಕ್ಷಣ ಇಲಾಖೆ, ಪದನಿಮುತ್ತ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಪ್ರಾಥಮಿಕ ಶಿಕ್ಷಣ ಇಲಾಖೆ ಹೊಸನಗರ, ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೊಸನಗರ ತಾಲ್ಲೂಕಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಓದುವುದರಲ್ಲಿ 93% ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ ಇದರ ಜೊತೆಗೆ ಆಟೋಟಗಳಲ್ಲಿ ಜಿಲ್ಲೆ ವಲಯ, ರಾಜ್ಯ ರಾಷ್ಟ್ರ ಮಟ್ಟದವರೆಗೂ ಜಯ ಶಾಲಿಯಾಗಿ ಬಂದಲ್ಲಿ ನಮಗೂ ಹಾಗೂ ತಾಲ್ಲೂಕಿಗೂ ಕೀರ್ತಿ ತಂದ ಹಾಗೇ ಆಗುತ್ತದೆ ಎಲ್ಲ ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ಆಟವಾಡಬೇಕು ಆಗ ಮಾತ್ರ ಕ್ರೀಡಾಕೂಟಗಳಿಗೆ ಬೆಲೆ ಬರುವುದರ ಜೊತೆಗೆ ನಡೆಸಿದ ಶಿಕ್ಷಣ ಇಲಾಖೆಗೂ ಪ್ರಯೋಜಕರಿಗೂ ಉತ್ತಮ ಹೆಸರು ಬರುತ್ತದೆ ಆದರೆ ಆಟೋಟಗಳಲ್ಲಿ ನಿರ್ಣಯ ಮಾಡುವವರು ಯಾವುದೇ ಭೇದ ಮಾಡಬಾರದು ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೇಳೂರು ಗೋಪಾಲಕೃಷ್ಣರವರು ವಹಿಸಿದ್ದರು. ಕ್ರೀಡಾಜ್ಯೋತಿಯನ್ನು ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನೆರಲೆ ರಮೇಶ್ ಸ್ವೀಕಾರ ಮಾಡಿಕೊಂಡರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ದೈಹಿಕ ಪರಿವೀಕ್ಷಕ ಬಾಲಚಂದ್ರರಾವ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್. ಸುರೇಶ್, ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಚಂದ್ರಕಲಾ ನಾಗರಾಜ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಿದಂಬರ, ತಹಶೀಲ್ದಾರ್ ರಶ್ಮಿ ಹಾಲೇಶ್, ಪ್ರಕಾಶ್, ರಂಗನಾಥ್, ಹರೀಶ್ ಎಂ ಎನ್, ಕಾರ್ಯದರ್ಶಿ ಪುಟ್ಟಸ್ವಾಮಿ, ರಾಜುಶೆಟ್ಟಿ, ಮಂಜಪ್ಪ, ಪಟ್ಟಣ ಪಂಚಾಯತಿ ಸದಸ್ಯರಾದ ಗುರುರಾಜ್, ಶಾಹಿನ, ಗೌತಮ್ ಕುಮಾರಸ್ವಾಮಿ, ಪ್ರದೀಪ, ಸತ್ಯನಾರಾಯಣ, ನಾಸೀರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಊಟದ ವ್ಯವಸ್ಥೆ ಹಾಗೂ ಬಹುಮಾನದ ಪ್ರಯೋಜಕತ್ವವನ್ನು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದವರು ವಹಿಸಿಕೊಂಡಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]