HOSANAGARA ; ಸಾಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ 1.08 ಕೋಟಿ ರೂ. ಲಾಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶನ್ ಉಪಸ್ಥಿತರಿದ್ದರು.
ದೇವಪ್ಪಗೆ ಜಿಲ್ಲಾ ಉತ್ತಮ ಸಹಕಾರಿ ಪ್ರಶಸ್ತಿ
HOSANAGARA ; ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಉತ್ತಮ ಸಹಕಾರಿ ಪ್ರಶಸ್ತಿಯನ್ನು ಟಿಸಿಸಿಎಸ್ ಅಧ್ಯಕ್ಷ ಕೆ.ಸಿ. ದೇವಪ್ಪಗೆ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಪ್ರದಾನ ಮಾಡಿದರು.
ಈ ವೇಳೆ ಸಹಕಾರ ಯೂನಿಯನ್ ಜಿಲ್ಲಾಧ್ಯಕ್ಷ ವಾಟಗೋಡು ಸುರೇಶ್, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ, ಪ್ರಮುಖ ಸಹಕಾರಿಗಳಾದ ಎಸ್.ಕೆ.ಮರಿಯಪ್ಪ, ಹರತಾಳು ನಾಗರಾಜ್, ಈಶ್ವರಪ್ಪಗೌಡ, ನಂಜುಂಡಪ್ಪ ಮೊದಲಾದವರು ಇದ್ದರು.