ರಿಪ್ಪನ್‌ಪೇಟೆ ; ನೆವಟೂರು ಗ್ರಾಮದ ಈಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ವೀಕ್ಷಣೆ ಮಾಡಿ ದೇವಸ್ಥಾನ ಸಮಿತಿಯವರಲ್ಲಿ ಸಮಾಲೋಚನೆ ನಡೆಸುವ ಮೂಲಕ ಇನ್ನೂ ಹೆಚ್ಚಿನ ಅನುದಾನವನ್ನು ಭರಿಸುವ ಭರವಸೆ ನೀಡಿದರು.
ಕಳೆದ ಆರ್ಥಿಕಾ ವರ್ಷದಲ್ಲಿ ತಾಲ್ಲೂಕಿನ ವಿವಿಧೆಡೆಗಳಲ್ಲಿನ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡಿಸಲಾಗಿದ್ದು ಕಾಮಗಾರಿ ಸಹ ಪ್ರಗತಿಯಲ್ಲಿದೆ. ಇನ್ನೂ ಇಲ್ಲಿನ ಸಮುದಾಯ ಭವನದ ಕಾಮಗಾರಿ ಅರ್ಧ ಭಾಗ ಮುಗಿದಿದೆ ಉಳಿದ ಶೇ. 50 ರಷ್ಟು ಕಾಮಗಾರಿಗೆ ಹಣಕಾಸಿನ ತೊಂದರೆಯಾಗುವುದೆಂದು ಸಮಿತಿಯವರು ಶಾಸಕರಲ್ಲಿ ಮನವಿ ಮಾಡಿಕೊಂಡಾಗ ಈ ಬಾರಿಯಲ್ಲಿ ಕ್ಷೇತ್ರದ ಅಭಿವೃದ್ದಿಗೆ ಸರ್ಕಾರ ಅನುದಾನ ನೀಡುವುದಾಗಿ ತಿಳಿಸಿದ್ದು ಅದರಂತೆ ಈ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಹಣ ಬಿಡುಗಡೆಗೊಳಿಸುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಚಂದ್ರಪ್ಪ, ತಹಶೀಲ್ದಾರ್ ರಶ್ಮಿ ಹಾಲೇಶ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಸತೀಶ್, ಬಾಳೂರು ಗ್ರಾಮ ಪಂಚಾಯತ್ ಸದಸ್ಯರಾದ ರಾಜುಗೌಡ, ದಿವಾಕರ, ಶಿವಮ್ಮ, ಲೀಲಾವತಿ, ಪಾರ್ವತಮ್ಮ, ರೇಖಾ, ಶಶಿಕಲಾ, ಬಾಳೂರು ಘಟಕದ ಕಾಂಗ್ರೆಸ್ ಅಧ್ಯಕ್ಷ ಸಂತೋಷ (ಚಿಂಟು), ಸಣ್ಣಕ್ಕಿ ಮಂಜು, ಶಿವಪ್ಪ ವಡಾಹೊಸಳ್ಳಿ, ನೆವಟೂರು ಅನೆಕೆರೆ ಬಾಳೂರು ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.