RIPPONPETE ; ಓದಿನ ಬಗ್ಗೆ ಮಕ್ಕಳಿಗೆ ಪೋಷಕರು ಹೆಚ್ಚು ಒತ್ತಡ ಹಾಕದೇ ಶಾಲೆ ಮುಗಿಸಿಕೊಂಡು ಬಂದ ವಿದ್ಯಾರ್ಥಿಗಳಿಗೆ ಕೆಲ ಸಮಯ ಆಟೋಟದಲ್ಲಿ ಆಸಕ್ತಿ ಬೆಳೆಸುವಂತಾಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಕರೆ ನೀಡಿದರು.
ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ರಿಪ್ಪನ್‌ಪೇಟೆ ಮೇರಿಮಾತಾ ಪ್ರೌಡಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 2024-25ನೇ ಸಾಲಿನ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವತ್ತ ಹೆಚ್ಚ ಒತ್ತು ನೀಡಬೇಕು ಹಾಗೂ ಕ್ರೀಡೆಯಿಂದ ಮಕ್ಕಳ ಬೌದ್ದಿಕ ಸಾಮಾರ್ಥವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಹೇಳಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಪೌಷ್ಟಿಕಾಂಶದ ಕೊರತೆ ಎದ್ದು ಕಾಣುತ್ತಿರುವ ಬಗ್ಗೆ ಬೇಸರ ವ್ಯಕ್ತಿಪಡಿಸಿ, ಸರ್ಕಾರ ವಾರಕ್ಕೆ ಎರಡು ದಿನ ಮೊಟ್ಟೆ ಮತ್ತು ಕಾಳು ಇನ್ನಿತರ ಪೌಷ್ಟಿಕಾಂಶದ ಆಹಾರ ವಿತರಣೆಗೆ ಕ್ರಮಕೈಗೊಂಡಿದೆ ಎಂದು ಹೇಳಿ, ಆದಷ್ಟು ತಮ್ಮ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರವನ್ನು ನೀಡುವಂತೆ ಪೋಷಕರಿಗೆ ಕರೆ ನೀಡಿದರು.
ಕಾಲೇಜ್ ಆವರಣದಲ್ಲಿ ಸುಸಜ್ಜಿತ ರಂಗಮಂದಿರ ಅಗತ್ಯತೆ ಇದ್ದು ಅದನ್ನು ಬರುವ ವರ್ಷದಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕಟ್ಟಡ ನಿರ್ಮಿಸುವ ಬಗ್ಗೆ ಈ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.
ಮೇರಿಮಾತಾ ಪ್ರೌಢಶಾಲೆಯ ಪ್ರಾಚಾರ್ಯ ಸಿಸ್ಟರ್ ಗ್ರೇಸ್ಲಿನ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು.
ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸದಸ್ಯರಾದ ಡಿ.ಈ
ಮಧುಸೂದನ್, ಆಶೀಫ್‌ಭಾಷಾ, ಗಣಪತಿ ಗವಟೂರು, ಎನ್.ಚಂದ್ರೇಶ್, ಸಾರಾಭಿ, ಅಶ್ವಿನಿ ರವಿಶಂಕರ್, ಪಿ.ಎಸ್.ಐ.ಪ್ರವೀಣ್, ಮೇರಿ ಮಾತಾ ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಲೆಕ್ಸ್, ದೈಹಿಕ ಶಿಕ್ಷಣಾಧಿಕಾರಿ ಬಾಲಚಂದ್ರ, ರವೀಂದ್ರ ಕೆರೆಹಳ್ಳಿ, ರಮೇಶ ಫ್ಯಾನ್ಸಿ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡರು ಹಾರೋಹಿತ್ತಲು, ಸಣ್ಣಕ್ಕಿ ಮಂಜ ಇನ್ನಿತರರು ಹಾಜರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇರಿಮಾತಾ ಶಾಲೆಯ ರಾಮಚಂದ್ರ ಸ್ವಾಗತಿಸಿದರು.