Ripponpete

ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಭೇಟಿ ; ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

RIPPONPETE ; ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲು ಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಬಿದ್ದು ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ ಮನೆಗೆ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕ ಆರ್ಥಿಕ ನೆರವು ನೀಡಿ ಅವಘಡದ ಸ್ಥಳಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳೊಂದಿಗೆ ಪರಿಶೀಲಿಸಿ ಮಾತನಾಡಿ, ರಸ್ತೆ ಸರಿಯಿಲ್ಲದಿದ್ದರಿಂದಲೇ ರೈತ ಮೃತಪಟ್ಟಿದ್ದಾನೆ ಎಂಬ ಆರೋಪ ಗ್ರಾಮಸ್ಥರರಲ್ಲಿದೆ. ಸಾಗುವಾನಿ ಮರಗಳ ಕಡಿತಲೆ ಪ್ರಕರಣದಲ್ಲಿ ಅಮಾಯಾಕರ ಬಿಟ್ಟು ಪ್ರಚೋದನೆ ನೀಡಿದ ಹಾಗೂ ನೈಜ ಅರೋಪಿಗಳ ವಿರುದ್ದ ತನಿಖೆ ನಡೆಸಿ ಪ್ರಕರಣ ದಾಖಲಿಸಿ ಕಾಡಾನೆಗಳ ಹಾವಳಿ ಬಗ್ಗೆಯುವ ಜನರಿಗೆ ಆತಂಕ ಮೂಡಿದ್ದು ನಿಮ್ಮ ಸಿಬ್ಬಂದಿಗಳೊಂದಿಗೆ ಪರಿಣತರನ್ನು ಕರೆಯಿಸಿಕೊಂಡು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿ ಎಂದು ಅರಣ್ಯ ಇಲಾಖೆಯ ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಪಟಗಾರ್‌ಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್, ಕಂದಾಯ ನಿರೀಕ್ಷಕ ಆಪ್ರೋಜ್, ಸಿರಿಗೆರೆ ವಲಯ ಅರಣ್ಯಾಧಿಕಾರಿ ಅರವಿಂದ್, ಮುಗೂಡ್ತಿ ವಲಯ ಅರಣ್ಯಾಧಿಕಾರಿ ಪವನಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪ ಗೌಡ ಹಾರೋಹಿತ್ತಲು, ನಾರಾಯಣಪ್ಪ, ಬೆಳ್ಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಯೋಗೀಶ್, ಡಿ.ಈ.ಮಧುಸೂಧನ್, ಆಸಿಫ್ ಭಾಷಾ, ಉಂಡಗೋಡು ನಾಗಪ್ಪ, ಶ್ರೀಧರ, ಕಟ್ಟೆನಾಗಪ್ಪ, ಅವಡೆ ಶಿವಪ್ಪ ಇನ್ನಿತರರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>