ಶಿವಮೊಗ್ಗ– ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆಯಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. ಖೈದಿಗೆ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಶಸ್ತ್ರಚಿಕಿತ್ಸೆ ಮೂಲಕ ಫೋನ್ ಹೊರತೆಗೆಯಲಾಗಿದೆ.
ದೌಲತ್ ಅಲಿಯಾಸ್ ಗುಂಡ (30) ಎಂಬ ಖೈದಿಯು ಶಿವಮೊಗ್ಗ ನ್ಯಾಯಾಲಯದಿಂದ 10 ವರ್ಷದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಜೂನ್ 24 ರಂದು ಕಾರಾಗೃಹ ಆಸ್ಪತ್ರೆಗೆ ಹಾಜರಾಗಿದ್ದ ಈತ, “ನಾನು ಕಲ್ಲು ನುಂಗಿದ್ದೇನೆ” ಎಂದು ಹೇಳಿದ್ದ. ಆದರೆ ವೈದ್ಯಕೀಯ ತಪಾಸಣೆಯಲ್ಲಿ ಆತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿ, ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು.
ಎಕ್ಸ್‌ರೇ ತಪಾಸಣೆಯಲ್ಲಿ ಸುಮಾರು ಮೂರು ಇಂಚು ಉದ್ದ ಮತ್ತು ಒಂದು ಇಂಚು ಅಗಲದ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಅದನ್ನು ಹೊರತೆಗೆದಿದ್ದಾರೆ. ಪ್ರಕರಣದ ಬಗ್ಗೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್.ಪಿ ಅವರು ತನಿಖೆಗೆ ಮುಂದಾಗಿದ್ದು, ನಿಷೇಧವಿದ್ದರೂ ಈ ಮೊಬೈಲ್ ಹೇಗೆ ಜೈಲಿನೊಳಗೆ ತಲುಪಿತು ಎಂಬುದರ ಬಗ್ಗೆ ಚರ್ಚೆ ನಡೆದಿದೆ.
ಈ ಘಟನೆ ಜೈಲಿನ ಭದ್ರತಾ ವ್ಯವಸ್ಥೆಯ ಮೇಲಿನ ಪ್ರಶ್ನೆಗಳನ್ನು ಎಬ್ಬಿಸಿದೆ.
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.