ತೀರ್ಥಹಳ್ಳಿ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫ್ಲೆಕ್ಸ್‌ಗೆ ಹಾಲು ಮತ್ತು ಗೋಮೂತ್ರ ಸಿಂಪಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಇತ್ತೀಚೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಅವರ ಭಾವಚಿತ್ರಕ್ಕೆ ಸ್ಟಿಕ್ಕರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದ್ದರು. ಈ ಘಟನೆಯನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು, “ಕಾಂಗ್ರೆಸ್ಸಿಗರು ಮುಟ್ಟಿದ್ದರಿಂದ ಮೋದಿ ಫೋಟೋ ಮೈಲಿಗೆ ಆಗಿದೆ” ಎಂದು ಹೇಳಿ ಫ್ಲೆಕ್ಸ್‌ಗೆ ಹಾಲು ಮತ್ತು ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರಹಾಕಿದರು. ಕಾಂಗ್ರೆಸ್‌ನ ಪ್ರತಿಭಟನೆ ರಾಜಕೀಯವಾಗಿ ವಿರೋಧ ವ್ಯಕ್ತಪಡಿಸುವ ಹೆಸರಿನಲ್ಲಿ ಅಸಭ್ಯ ರೀತಿಯಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು.
ಮೋದಿ ಭಾವಚಿತ್ರಕ್ಕೆ ಸ್ಟಿಕ್ಕರ್ ಅಂಟಿಸಿದ ಕ್ರಮವನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರನ್ನು ಕಿಚಾಯಿಸುವ ರೀತಿಯಲ್ಲಿ ಈ ‘ಶುದ್ಧೀಕರಣ’ ಕಾರ್ಯಕ್ರಮ ನಡೆಸಿದರು. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ರಾಜಕೀಯ ಚರ್ಚೆ ಮತ್ತು ಕುತೂಹಲದ ವಾತಾವರಣ ನಿರ್ಮಾಣವಾಯಿತು.
ಬಿಜೆಪಿ ಕಾರ್ಯಕರ್ತರ ಪ್ರಕಾರ, ರಾಜಕೀಯ ವಿರೋಧ ಇರಬಹುದು, ಆದರೆ ದೇಶದ ಪ್ರಧಾನಿಯ ಭಾವಚಿತ್ರಕ್ಕೆ ಅವಮಾನ ಮಾಡುವ ರೀತಿಯ ನಡೆ ಸರಿಯಲ್ಲ. ಇದಕ್ಕೆ ಪ್ರತಿಯಾಗಿ ತಾವು ಈ ರೀತಿಯ ವಿನೂತನ ಪ್ರತಿಭಟನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಈ ಘಟನೆಯು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ.