ಹೊಸನಗರ ; ಮಲೆನಾಡಿನಲ್ಲಿ ಮಂಗನ ಕಾಯಿಲೆಯ (KFD) ಭೀತಿ ಮತ್ತೆ ಆವರಿಸಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬೀಳುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಈ ಅವಧಿಯ ಮೊದಲ ಪ್ರಕರಣ ಪತ್ತೆಯಾಗಿದೆ.
ತಾಲೂಕಿನ ಬಿಳ್ಳೋಡಿ ಗ್ರಾಮದ 50 ವರ್ಷದ ಮಹಿಳೆಗೆ ಕೆಎಫ್ಡಿ ಪಾಸಿಟಿವ್ ಬಂದಿದೆ. ಡಿಸೆಂಬರ್, ಜನವರಿಗೆ ಹೊತ್ತಿಗೆ ಕಾಣಿಸಿಕೊಳ್ಳುತ್ತಿದ್ದ ವೈರಸ್ ಈ ಬಾರಿ ನವೆಂಬರ್ನಲ್ಲೇ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ.

ಕಳೆದ ವರ್ಷ ಕೂಡ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಕರಣ ಕಂಡು ಬಂದಿತ್ತು. ಲಸಿಕೆ ಇಲ್ಲದ ಮೂರನೇ ಅವಧಿ ಇದಾಗಿದ್ದು ಆರೋಗ್ಯ ಇಲಾಖೆ ಜಾಗೃತಿ ಹೊರತಾಗಿಯೂ ಕಾಯಿಲೆ ಹರಡುವುದನ್ನು ನಿಯಂತ್ರಿಸಲು ಆಗುತ್ತಿಲ್ಲ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





