ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಇರುಳುಗಣ್ಣು ನಿವಾರಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯಲ್ಲಿ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ನೀಡಲಾಗುತ್ತಿದ್ದು ಆದರಂತೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ 6 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ಡ್ರಾಫ್ಸ್ ಅನ್ನು ಮಂಗಳವಾರದಂದು ನೀಡಲಾಗಿದ್ದು ಅಂದೇ ಸಂಜೆ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ತಕ್ಷಣ ನಾವುಗಳು ಖಾಸಗಿ ಅಸ್ಪತ್ರೆಯಲ್ಲಿ ತೋರಿಸಲಾಗಿದೆ‌. ಉಲ್ಬಣಗೊಂಡ ಪರಿಣಾಮದಿಂದಾಗಿ ಮಕ್ಕಳು ತೀವ್ರ ನಿತ್ರಾಣಗೊಂಡಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಕರೆತಂದು ತಕ್ಷಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ‌.

ಸುದ್ದಿ ಹರಡುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಹೊಸನಗರ ಸಿಡಿಪಿಓ ಕಛೇರಿ ಅಧಿಕಾರಿಗಳು ಸೇರಿದಂತೆ ಇತರ ತಾಲ್ಲೂಕು ಮಟ್ಟದ ಅಧಿಕಾರಿಗಳು ದೌಡಾಯಿಸಿದ್ದರು.

Leave a Comment