ಚಿಕ್ಕಮಗಳೂರು ; ಬಂದ್‌ಗೆ ಕರೆ ನೀಡಿದ್ದ 20ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸರ ವಶಕ್ಕೆ !

Written by malnadtimes.com

Published on:

ಚಿಕ್ಕಮಗಳೂರು ; ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಜಿಲ್ಲಾಡಳಿತದ ವಿರೋಧದ ನಡುವೆ ವಿ.ಎಚ್.ಪಿ. ಹಾಗೂ ಬಜರಂಗದಳ ಕಾರ್ಯಕರ್ತರು ಕಾಫಿನಾಡು ಬಂದ್‌ಗೆ ಕರೆ ನೀಡಿದ್ದು ಈ ವೇಳೆ ಮೆರವಣಿಗೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಬಂದ್‌ಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲವಾಗಿದ್ದು ಈ ನಡುವೆ ಜಿಲ್ಲಾಡಳಿತದ ವಿರೋಧದ ನಡುವೆ ಓಂಕಾರೇಶ್ವರ ದೇವಸ್ಥಾನದಿಂದ ಹನುಮಂತಪ್ಪ ವೃತ್ತದವರೆಗೂ ಹಿಂದೂ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದು ಈ ವೇಳೆ ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಹಿನ್ನೆಲೆ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸರು.

Leave a Comment