ಹೊಸನಗರ

ವಾಯುಪಡೆಯ ವಾರೆಂಟ್ ಅಧಿಕಾರಿ ಮಂಜುನಾಥ್ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ

ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಭಾರತೀಯ ವಾಯುಸೇವೆಯ ತರಬೇತುದಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್ (36) ನೆಲಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಸಾವಿಗೀಡಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರ ವಾಯುಸೇನ ಪಿಟಿಎಸ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇವರ ನಿಧನಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತೀವ್ರ ಸಂತಾಪ ಸೂಚಿಸಿದ್ದು, ‘ವಾಯುಪಡೆಯ ವಾರೆಂಟ್ ಅಧಿಕಾರಿಯಾದ ಮಂಜುನಾಥ ಜಿ.ಎಸ್ ಇವರು ನಿಧನರಾದ ಸುದ್ದಿ ತಿಳಿದು ತುಂಬಾ ದುಃಖವಾಯಿತು. ಅವರ ಅಕಾಲಿಕ ನಿಧನ ಇಡೀ ನಾಡಿಗೆ ತುಂಬಲಾರದ ನಷ್ಟವಾಗಿದೆ. ಇವರ ತಂದೆ-ತಾಯಿಯವರು ಕೃಷಿಕ ಕುಟುಂಬದವರಾಗಿದ್ದು ಅವರು ತಂದೆ-ತಾಯಿ, ಪತ್ನಿ, ಸಹೋದರ ಮತ್ತು ಇಬ್ಬರು ಸಹೋದರಿಯರನ್ನು ಬಿಟ್ಟು ಹೋಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಬಂಧು-ಬಳಗಕ್ಕೆ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>