ಹೊಸನಗರ ; ಪಟ್ಟಣದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ 5ನೇ ದಿನದ ಜಾತ್ರಾ ಮಹೋತ್ಸವದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಪಾಲ್ಗೊಂಡು ಶ್ರೀ ದೇವಿಯ ದರ್ಶನ ಪಡೆದರು.

ಬಳಿಕ ಜಾತ್ರಾ ಸಮಿತಿ ವತಿಯಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಸಮಿತಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಿದೆ ಎಂದು ಪ್ರಶಂಸಿಸಿದರು. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಸಂತಸ ವ್ಯಕ್ತಪಡಿಸಿ ಕೆಲವು ಸಮಯ ಕಳೆದರು.

ಈ ಸಂದರ್ಭದಲ್ಲಿ ಮಾರಿಕಾಂಬಾ ಜಾತ್ರಾ ಸಮಿತಿ ಅಧ್ಯಕ್ಷ ಹೆಚ್.ಎಲ್. ದತ್ತಾತ್ರೇಯ, ಮನೋಹರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಎನ್.ಆರ್. ದೇವಾನಂದ್, ಸುರೇಂದ್ರ ಕೊಟ್ಯಾನ್, ಎ.ವಿ. ಮಲ್ಲಿಕಾರ್ಜುನ್, ಯೋಗೇಂದ್ರ ಕತ್ರಿಕೊಪ್ಪ, ಮಂಜು, ಸಂಜೀವ್, ಮಂಡಾನಿ ಮೋಹನ್, ನಿತ್ಯಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1Ez4fc7mm5/

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





