ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು !

Written by malnadtimes.com

Published on:

MUDIGERE | ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮಲೆನಾಡು (Malenadu) ಭಾಗದಲ್ಲಿ ಗಾಳಿ, ಮಳೆಯ (Rain) ಅಬ್ಬರ ಜೋರಾಗಿದ್ದು ಈ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು (Car) ಹೇಮಾವತಿ ನದಿಗೆ (Hemavathi River) ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ (Banakal) ಗ್ರಾಮದ ಬಳಿ ಶನಿವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

HOSANAGARA | ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಬಂತ್ತೊಂದು ಕರೆ, ನನಗೆ ಹಿಂದಿ ಬರಲ್ಲ ಎಂದು ಕಾಲ್ ಕಟ್ ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್ ! ಹಾಗಾದ್ರೆ ಏನಾಯ್ತು ?

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರು ಬೆಳ್ತಂಗಡಿಯಿಂದ ಮೂಡಿಗೆರೆಗೆ ಬರುತ್ತಿತ್ತು ಮಳೆಯ ಕಾರಣ ಬಣಕಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನದಿಗೆ ದುಮುಕಿದೆ.ಮೊನ್ನೆಯೂ ಇದೆ ಜಾಗದಲ್ಲಿ ಸ್ವಿಫ್ಟ್ ಕಾರೊಂದು ಬಿದ್ದಿತ್ತು, ನಿನ್ನೆ ಮತ್ತೆ ಅದೇ ಜಾಗದಲ್ಲಿ ಆಲ್ಟೊ ಕಾರು ಬಿದ್ದಿದೆ.

ವಿದ್ಯುತ್ ಸ್ಪರ್ಶ, ಮೂರು ಹಸುಗಳ ಸಾವು !

ಭಾರಿ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತುಳಿದು ಮೂರು ಹಸುಗಳು ಮೃತಪಟ್ಟ ಘಟನೆ ಕೊಪ್ಪ ತಾಲೂಕಿನ ಕೆಸವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧರಮಠ ಸಮೀಪ ನಡೆದಿದೆ.

ರಸ್ತೆ ಪಕ್ಕದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಹಸುಗಳು ಮೃತಪಟ್ಟಿದೆ. ರಾಮರಾಜ್‌ ಎಂಬುವರಿಗೆ ಸೇರಿದ ಎರಡು ಹಸುಗಳು ಮಹೇಶ್‌ ಎಂಬುವರಿಗೆ ಸೇರಿದ ಒಂದು ಹಸು ಮೃತಪಟ್ಟಿವೆ. ಭಾರಿ ಮಳೆಯಿಂದಾಗಿ ನೂರಾರು ಮರಗಳು ಹಾಗೂ ವಿದ್ಯುತ್‌ ಕಂಬ ಧರೆಗೆ ಉರುಳಿದ್ದು ವಿದ್ಯುತ್‌ ಪೂರೈಕೆಯಲ್ಲಿ ಅಡ್ಡಿಯಾಗಿದ್ದು ಮಳೆಯ ನಡುವೆ ಮೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.

ಮೂಡಿಗೆರೆ, ಶೃಂಗೇರಿ, ಎನ್‌.ಆರ್‌. ಪುರ ತಾಲ್ಲೂಕುಗಳಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಸತತ ಮಳೆಯಿಂದ ಬಹುತೇಕ ನದಿ ಹಳ್ಳಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.

SHIVAMOGGA ನಾಳೆ ಶಿವಮೊಗ್ಗಕ್ಕೆ ಕೇಂದ್ರ ಸಚಿವ‌ ಹೆಚ್.ಡಿ. ಕುಮಾರಸ್ವಾಮಿ, ಯಾವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ?

Leave a Comment