ರಿಪ್ಪನ್‌ಪೇಟೆ ; ನಿವೃತ್ತ ಮುಖ್ಯ ಶಿಕ್ಷಕ ಮೂಗುಡ್ತಿ ರಾಜಶೇಖರ (75) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ 8.40ಕ್ಕೆ ನಿಧನ ಹೊಂದಿದರು.
ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಕಳಚಿದ ಸಿದ್ದಗಂಗಾ ಮಠದ ಮಲೆನಾಡಿನ ಕೊಂಡಿ ;
ಮಲೆನಾಡಿನ ಬಡವಿದ್ಯಾರ್ಥಿಯಾಗಿ ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡಿ ಶಿಕ್ಷಕರಾಗಿ ಸರ್ಕಾರಿ ಉದ್ಯೋಗದಲ್ಲಿ ಕರ್ತವ್ಯ ನಿರ್ವಹಿಸಿದ ಮಲೆನಾಡಿನ ಕೊಂಡಿ ರಾಜಶೇಖರ ಇವರು ಬಿದರಹಳ್ಳಿ-ಗಿಣಸೆ ಮೂಗುಡ್ತಿ, ಕಗಚಿ, ಸೊಪ್ಪಿನಮಲ್ಲೆ, ಕೊಡಸೆ ಸರ್ಕಾರಿ ಶಾಲೆಯಲ್ಲಿ ಸಹಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು.
ಸಂತಾಪ ;
ಮೂಗುಡ್ತಿ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ರಾಜಶೇಖರ ಇವರ ನಿಧನಕ್ಕೆ ಆನಂದಪುರ ಮುರುಘಾರಾಜೇಂದ್ರ ಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ, ಶಾಸಕ ಅರಗ ಜ್ಞಾನೇಂದ್ರ, ಅಖಿಲಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷರು ಹಾಗೂ ಬಸವೇಶ್ವರ ವೀರಶೈವ ಸಮಾಜದ ಆಧ್ಯಕ್ಷರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





