ತೀರ್ಥಹಳ್ಳಿ : ಮುಂಡಗಾರು ಲತಾ ಮತ್ತು ವನಜಾಕ್ಷಿ ಮೂರು ದಿನ ಪೊಲೀಸ್ ಕಸ್ಟಡಿಗೆ

Written by malnadtimes.com

Published on:

ತೀರ್ಥಹಳ್ಳಿ ; ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಇಬ್ಬರನ್ನು ತೀರ್ಥಹಳ್ಳಿಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿತ್ತು. ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಈ ಕಾರಣದಿಂದ ತೀರ್ಥಹಳ್ಳಿ ಕೋರ್ಟ್‌ಗೆ ಸೋಮವಾರ ಹಾಜರುಪಡಿಸಲಾಗಿತ್ತು.

ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೀತಾಮಣಿಯವರು ವಿಚಾರಣೆ ನಡೆಸಿ ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಪೊಲೀಸರಿಗೆ ಸಹಕರಿಸುವಂತೆ ಆದೇಶ ನೀಡಿದ್ದಾರೆ.

Leave a Comment