ಶಿವಮೊಗ್ಗ

ಮುಂಡಗಾರು ಲತಾ ಮತ್ತು ವನಜಾಕ್ಷಿ ಶಿವಮೊಗ್ಗ ಪೊಲೀಸರ ವಶಕ್ಕೆ !

ಶಿವಮೊಗ್ಗ ; ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತರುತ್ತಿದ್ದು, ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.

ಮಂಗಳವಾರ ಇನ್ನೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಕೋರ್ಟ್‌ಗೆ ಹಾಜರುಪಡಿಸಲಿದ್ದು, ಬುಧವಾರ ಹೊಸನಗರದ ಕೋರ್ಟ್‌ಗೂ ಹಾಜರುಪಡಿಸಿದ ಬಳಿಕ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು, ಕರೆತರುತ್ತಿರುವ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.

ಶಿವಮೊಗ್ಗ ಜಿಲ್ಲೆಯಲ್ಲೇ ಲತಾ ವಿರುದ್ಧ ಆಗುಂಬೆ ಠಾಣೆಯಲ್ಲಿ ಮೂರು(12/9, 51/09 ಹಾಗೂ 03/12) ಕೇಸ್ ದಾಖಲಾಗಿವೆ. ಅದೇ ರೀತಿ ವನಜಾಕ್ಷಿ ವಿರುದ್ಧ ಸಹ ಕೇಸ್ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!