ಶಿವಮೊಗ್ಗ:ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಜುಲೈ 4) ಸಂಜೆ ಸಂಭವಿಸಿದ ನಾಗರ ವಿಗ್ರಹ ಧ್ವಂಸ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಘಟನೆ ಮೊಹರಂ ಹಿನ್ನೆಲೆಯಲ್ಲಿ ಸಂಭವಿಸಿದ್ದು ಎಂದು ಪ್ರಾರಂಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಊಹಾಪೋಹಗಳಿಗೆ ಕಾರಣವಾಯಿತು.
ಘಟನೆಯಾದ ಬೆನ್ನಲ್ಲೇ ಸಾರ್ವಜನಿಕರಲ್ಲಿ ಗೊಂದಲದ ಪರಿಸ್ಥಿತಿ ಉಂಟಾಗಿದ್ದು, ಸಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಅನೇಕ ಸಂದೇಶಗಳು ಹರಿದಾಡುತ್ತಿದ್ದವು.
ಆರೋಪಿ ಅರೆಸ್ಟ್: ಪೊಲೀಸರ ಸ್ಪಷ್ಟನೆ
ಈ ಎಲ್ಲ ಗೊಂದಲಗಳಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಈಗ ಸ್ಪಷ್ಟನೆ ನೀಡಿದ್ದು, ವಿಗ್ರಹವನ್ನು ಧ್ವಂಸಗೊಳಿಸಿದ ಆರೋಪಿ ಸೈಯದ್ ಎಂಬ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಆತನ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.ಘಟನೆಯಲ್ಲಿ ಇಬ್ಬರ ಬಂಧನವಾಗಿದೆ .
ಎಸ್‌ಪಿ ಅವರ ಪ್ರಕಾರ, “ಈ ಘಟನೆಯು ಸಂಪೂರ್ಣವಾಗಿ ವ್ಯಕ್ತಿಗತ ಕೃತ್ಯವಾಗಿದ್ದು, ಧಾರ್ಮಿಕ ಅಥವಾ ಸಂಘಟಿತ ಉದ್ದೇಶವಿಲ್ಲ. ಸಾರ್ವಜನಿಕರು ಶಾಂತತೆ ಕಾಪಾಡಿ ಸಹಕಾರ ನೀಡಬೇಕು,” ಎಂದು ಮನವಿ ಮಾಡಿದ್ದಾರೆ.
ಸುದ್ದಿಯ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ
ಘಟನೆಯ ಸ್ಥಳದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅನಾವಶ್ಯಕ ಗೊಂದಲವನ್ನು ತಪ್ಪಿಸಲು ಪ್ರಯತ್ನಿಸಲಾಗುತ್ತಿದೆ. ನಗರದಲ್ಲಿ ಶಾಂತಿಯುತ ವಾತಾವರಣ ಕಾಪಾಡುವಲ್ಲಿ ಪೊಲೀಸರು ಎಚ್ಚರಿಕೆಯಿಂದ ಇರುತ್ತಿದ್ದಾರೆ.
ಸೊರಬದಲ್ಲಿ ಆಡಳಿತ ವೈಫಲ್ಯ, ಅಭಿವೃದ್ಧಿಗೆ ಧಕ್ಕೆ: ಕುಮಾರ್ ಬಂಗಾರಪ್ಪ ವಾಗ್ದಾಳಿ
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.