ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು.
ಇಂದು ಬೆಳಗ್ಗೆ 6 ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಅಲಂಕಾರ ಪೂಜೆ ಜರುಗಿತು.

ಶ್ರೀ ನಾಗೇಂದ್ರ ಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನಾಶೀರ್ವಾದ ಪಡೆದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಲೇಖನವನ್ನು ಮುಂದುವರಿಸಿ ಓದಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಮತ್ತು ಹೆಚ್.ಎಂ.ವರ್ತೇಶ್‌ಗೌಡ ಸೇರಿದಂತೆ ಸಮಿತಿಯ ಸದಸ್ಯರು ಶಾಸಕ ಗೋಪಾಲಕೃಷ್ಣ ಬೇಳೂರನ್ನು ಸನ್ಮಾನಿಸಿ ಗೌರವಿಸಿ ಸತ್ಕರಿಸಿದರು. ನಂತರ ಸಾಮೂಹಿಕ ಅನ್ನಸಂತರ್ಪಣೆ ಸಹ ಜರುಗಿತು.

