ಶಿಕಾರಿಪುರ

ಮಧು ಬಂಗಾರಪ್ಪ ವಿರುದ್ಧದ ಹೇಳಿಕೆಗೆ ಸಂಸದ ರಾಘವೇಂದ್ರ ಕ್ಷಮೆ ಕೇಳಲಿ,ಕ್ಷಮೆ ಕೇಳದಿದ್ದರೆ ಮನೆಗೆ ಮುತ್ತಿಗೆ: ನಾಗರಾಜ್ ಗೌಡ

ಶಿಕಾರಿಪುರದ ಪ್ರತಿಭಟನೆಗೆ ಸಂಬಂಧಿಸಿ ಸಚಿವ ಮಧು ಬಂಗಾರಪ್ಪ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ನಾಗರಾಜ್ ಗೌಡ, ಬಹಿರಂಗ ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಮಧು ಬಂಗಾರಪ್ಪ ವಿರುದ್ಧದ ಹೇಳಿಕೆಗೆ ಸಂಸದ ರಾಘವೇಂದ್ರ ಕ್ಷಮೆ ಕೇಳಲಿ,ಕ್ಷಮೆ ಕೇಳದಿದ್ದರೆಮನೆಗೆ ಮುತ್ತಿಗೆ: ನಾಗರಾಜ್ ಗೌಡ – nagarj giwda

ಶಿವಮೊಗ್ಗ: ಕಸ್ತೂರಿರಂಗನ್ ವರದಿ ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಕುರಿತು ಸಂಸದ ಬಿ.ವೈ. ರಾಘವೇಂದ್ರ ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ, ಸಂಸದರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕಾರಿಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ, ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಒಳಪಟ್ಟಿರುವ ಶಿಕಾರಿಪುರ ತಾಲ್ಲೂಕಿನ 12 ಗ್ರಾಮಗಳ ಜನರ ಪರವಾಗಿ ಸಚಿವ ಮಧು ಬಂಗಾರಪ್ಪ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು ಎಂದರು.

ಕ್ಷಮೆ ಕೇಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಸೆಪ್ಟೆಂಬರ್ 18ರಂದು ನಡೆದ ಬಿಜೆಪಿ ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ನಾಗರಾಜ್ ಗೌಡ ಆರೋಪಿಸಿದರು.

“ಸಂಸದರು ಸಚಿವ ಮಧು ಬಂಗಾರಪ್ಪ ಅವರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ ಶಿಕಾರಿಪುರ ತಾಲ್ಲೂಕು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಸಂಸದರ ಮನೆಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಸಿದರು.

ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಕೇಂದ್ರದ ವಿರುದ್ಧ ಟೀಕೆ

ಕಸ್ತೂರಿರಂಗನ್ ವರದಿ ಜಾರಿಗೊಳಿಸಬಾರದೆಂದು ಸಂಸದರು ಕೇಂದ್ರದ ಅರಣ್ಯ ಸಚಿವರು ಹಾಗೂ ಸಂಬಂಧಪಟ್ಟ ನಾಯಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ಹೇಳುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಪದೇಪದೇ ಕರಡು ಅಧಿಸೂಚನೆ ಹೊರಡಿಸುತ್ತಿರುವುದು ಸಂಸದರ ಮನವಿಗೆ ಕೇಂದ್ರದಲ್ಲಿ ಮನ್ನಣೆ ದೊರೆಯದಿರುವುದನ್ನು ತೋರಿಸುತ್ತದೆ ಎಂದು ನಾಗರಾಜ್ ಗೌಡ ಟೀಕಿಸಿದರು.

ಮಲೆನಾಡಿನ ರೈತರು ಮತ್ತು ಸ್ಥಳೀಯ ನಿವಾಸಿಗಳ ಆತಂಕವನ್ನು ನಿವಾರಿಸಲು ಜನಪ್ರತಿನಿಧಿಗಳು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ಏತ ನೀರಾವರಿ ಯೋಜನೆಗಳ ಕುರಿತೂ ವಾಗ್ದಾಳಿ

ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧವೂ ನಾಗರಾಜ್ ಗೌಡ ವಾಗ್ದಾಳಿ ನಡೆಸಿದರು.

ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ಸಾರ್ವಜನಿಕರ ತೆರಿಗೆ ಹಣ ಬಳಸಲಾಗಿದೆ. ಆದರೆ ಈ ಯೋಜನೆಗಳನ್ನು ತಮ್ಮ ವೈಯಕ್ತಿಕ ಹಣದಿಂದ ಅನುಷ್ಠಾನಗೊಳಿಸಿದಂತೆ ಸಾರ್ವಜನಿಕ ಸಭೆಗಳಲ್ಲಿ ಬಿಂಬಿಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್